ಶಿರಸಿ: ರಾಜ್ಯದ ಬಿಜೆಪಿಯ ನೂತನ ಅಧ್ಯಕ್ಷ ಬಿ.ವೈ.ಎಸ್. ವಿಜಯೇಂದ್ರ ಜ. 23ರಂದು ಶಿರಸಿಗೆ ಆಗಮಿಸಲಿದ್ದಾರೆ.
ರಾಜಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ವಿಜಯೇಂದ್ರರಿಗೆ ಜಿಲ್ಲಾ ಬಿಜೆಪಿ ಘಟಕದಿಂದ ಸನ್ಮಾನ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಇದೇ ವೇಳೆ ಉತ್ತರಕನ್ನಡ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ನಡೆಯಲಿದೆ. ಬಳಿಕ ಲೋಕಸಭಾ ಚುನಾವಣೆಯ ಕುರಿತಾಗಿ ಜಿಲ್ಲೆಯ ಶಾಸಕರು ಹಾಗೂ ಪ್ರಮುಖರೊಂದಿದೆ ವಿಜಯೇಂದ್ರ ಸಭೆ ನಡೆಸಲಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.