Slide
Slide
Slide
previous arrow
next arrow

ರಕ್ತದಾನ ಮೂಲಕ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಭಾಗಿಯಾಗಿ: ಪಿಎಸ್ಐ ಸಿದ್ದಪ್ಪ

300x250 AD

ಯಲ್ಲಾಪುರ: ರಕ್ತದಾನ ಮಹಾದಾನ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಪಿಎಸ್ಐ ಸಿದ್ದಪ್ಪ ಗುಡಿ ಹೇಳಿದರು.

ಅವರು ತಾಲೂಕಿನ ಉಮ್ಮಚಗಿಯ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯದಲ್ಲಿ 11ನೇ ವರ್ಷದ ಸ್ವಯಂಪ್ರೇರಿತ ರಕ್ತ ದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಡಾ. ಎಂ ಎಸ್ ಭಟ್ ಮಾರಿಗೋಳಿ, ಗ್ರಾ ಪಂ ಅಧ್ಯಕ್ಷ ಕುಪ್ಪಯ್ಯ ಪೂಜಾರಿ ಮಾತನಾಡಿದರು. ಶಿರಸಿಯ ಪಂಡಿತ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ಮಮತಾ ಹೆಗಡೆ ರಕ್ತದಾನದ ಮಹತ್ವದ‌ ಕುರಿತು ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಟಿ.ವಿ.ಹೆಗಡೆ ಬೆದೆಹಕ್ಕಲು, ಪ್ರಾಚಾರ್ಯ ಡಾ.ನಾಗೇಶ ಭಟ್ಟ, ಅಧ್ಯಾಪಕರು ವಿದ್ಯಾರ್ಥಿಗಳು ಊರಿನ ಪ್ರಮುಖರು ಉಪಸ್ಥಿತರಿದ್ದರು. ವಿ. ರವಿ ಜೋಶಿ ನಿರ್ವಹಿಸಿದರು. ಗುರುಪ್ರಸಾದ್ ಭಟ್ ವಂದಿಸಿದರು. ಸಂಸ್ಥೆಯ ವಿದ್ಯಾರ್ಥಿಗಳು, ಸಾರ್ವಜನಿಕರು ರಕ್ತದಾನ ಮಾಡಿದರು.

300x250 AD

Share This
300x250 AD
300x250 AD
300x250 AD
Back to top