ಕಾರವಾರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಜನವರಿ 20 ಮತ್ತು 21 ರಂದು ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಸದರಿ ದಿನದಂದು ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ವಿವಿಧ ಜಿಲ್ಲೆಗಳಿಂದ ಸುಮಾರು 2475 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಈ ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಾಗಿರುವುದರಿಂದ, ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಿಂದ ಪರೀಕ್ಷಾ ಕೇಂದ್ರಗಳಿಗೆ ದಿನನಿತ್ಯದ ಸಾರಿಗೆ ಸಂಸ್ಥೆಯ ಬಸ್ಗಳನ್ನು ನಿಗಧಿತ ಸಮಯಕ್ಕೆ ಬಿಡುವ ಹಾಗೂ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡುವಂತೆ ಮತ್ತು ಬಸ್ನ ಅನಾನುಕೂಲತೆಯಿಂದ ಯಾವುದೇ ಅಭ್ಯರ್ಥಿ ಪರೀಕ್ಷೆಯಿಂದ ವಂಚಿತರಾಗದಂತೆ ಸೂಕ್ತ ಬಸ್ಗಳ ವ್ಯವಸ್ಥೆ ಮಾಡುವಂತೆ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದ್ದಾರೆ.