Slide
Slide
Slide
previous arrow
next arrow

ಶ್ರೀನಿಕೇತನದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

300x250 AD

ಶಿರಸಿ: ಇಸಳೂರಿನ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಶಾಲೆಯಲ್ಲಿ ಜನವರಿ 17, ಬುಧವಾರದಂದು ಸಾರ್ವಜನಿಕ ಜಾಗೃತಿ ಅಭಿಯಾನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅತಿಥಿಗಳಾಗಿ ಆಗಮಿಸಿದ ಡಾ.ರವಿ ಪಟವರ್ಧನ 18 ವರ್ಷದೊಳಗಿನ ಮಕ್ಕಳು ಬೈಕ್ ಚಲಾವಣೆ ಹಾಗೂ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ಗಳನ್ನು ಹೊಂದುವುದು ಶಿಕ್ಷಾರ್ಹ ಅಪರಾಧವೆಂದು ತಿಳಿಹೇಳಿದರು. ರಮೇಶ ಮುಚ್ಛಂಡಿ ಮಾತನಾಡಿ ತಮ್ಮ ಪೊಲೀಸ್ ವೃತ್ತಿ ಜೀವನದ ಕೆಲ ಅನುಭವಗಳನ್ನು ಮಕ್ಕಳೊಂದಿಗೆ ಹಂಚಿಕೊಂಡರು ಹಾಗೂ ಸಾಮಾಜಿಕ ಜಾಲತಾಣದ ದುರುಪಯೋಗದ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಕೆ. ಎನ್. ಹೊಸಮನಿ, ಶಾಲೆಯ ಆಡಳಿತ ಮಂಡಳಿಯ ಸದಸ್ಯರಾದ ಆರ್.ಎಸ್. ಹೆಗಡೆ ಮತ್ತು ಪ್ರಶಾಂತ ಭಟ್, ಪ್ರಾಂಶುಪಾಲರಾದ ವಸಂತ್ ಭಟ್, ಉಪಪ್ರಾಂಶುಪಾರಾದ ಶ್ರೀಮತಿ ವಸುಧಾ ಹೆಗಡೆ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶ್ರೀಮತಿ ಅಶ್ವಿನಿ ಜಿ. ಹೆಗಡೆ ಎಲ್ಲರನ್ನು ಸ್ವಾಗತಿಸಿದರು ಹಾಗೂ ಕುಮಾರಿ ಶಿಲ್ಪಾ ಎಲ್. ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಶ್ರೀಮತಿ ಡಿಂಪಲ್ ವಂದಿಸಿದರು.

300x250 AD
Share This
300x250 AD
300x250 AD
300x250 AD
Back to top