ಕಾರವಾರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಅವರು ಜ. 20 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಕಾರವಾರ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ನಂತರ ಬೆಳಗ್ಗೆ 11 ಗಂಟೆಗೆ ಅಂಕೋಲಾದ ಜೆ.ಸಿ ಕಾಲೇಜಿನಲ್ಲಿ ಎಸ್ಪಿ ಕಾಮತ ಅವರ ನೆನಪಿಗಾಗಿ ನಡೆಯುವ , ಶಾಲಾ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.