Slide
Slide
Slide
previous arrow
next arrow

ಕೇಂದ್ರ ಸರ್ಕಾರದ ಯೋಜನೆ ಪ್ರಯೋಜನ ಪಡೆಯಿರಿ: ಗಣಪತಿ ಉಳ್ವೆಕರ್

300x250 AD

ಕಾರವಾರ: ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ತಲುಪಿಸುವ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪಯಾತ್ರೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಸೌಲಭ್ಯದಿಂದ ಯಾರು ವಂಚಿತರಾಗಬಾರದು ಪತ್ರಿಯೊಬ್ಬರಿಗೂ ಯೋಜನೆಯ ಪ್ರಯೋಜನೆ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಡಿ ಉಳ್ವೇಕರ ಹೇಳಿದರು. ಅವರು ಶುಕ್ರವಾರ ನಗರಸಭೆ ಆವರಣದಲ್ಲಿ ಆಯೋಜಿಸಿದ್ದ ನಗರ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ 215 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜಿಸಿ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಅದರ ಪ್ರಯೋಜನಗಳ ಬಗ್ಗೆ ತಿಳಿಸಲಾಗಿದೆ ಹಾಗೂ ಯೋಜನೆಗಳ ಸೌಲಭ್ಯ ಪಡೆಯದೆ ಇರುವವರನ್ನು ಗುರುತಿಸಿ ಅವರಿಗೆ ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಸಲಾಗಿದೆ ಎಂದರು. ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಜಿಲ್ಲಾ ಸಂಚಾಲಕ ರಾಜೇಂದ್ರ ನಾಯಕ ಮಾತನಾಡಿ, ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನವು ಜನವರಿ 26ರವರೆಗೆ ನಡೆಯಲಿದೆ. ದೇಶದಲ್ಲಿ 3000 ಜಾಗೃತಿ ವ್ಯಾನ್ ಮೂಲಕ ಗ್ರಾಮಾಂತರ ಮತ್ತು ನಗರ ವ್ಯಾಪ್ತಿಯಯಲ್ಲಿ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಕೇಂದ್ರ ಸರ್ಕಾರದ ಜನಪರ ಯೋಜನೆಗಳಾದ ಪ್ರಧಾನ ಮಂತ್ರಿ ಆವಾಸ ಯೋಜನೆ (ಗ್ರಾಮೀಣ), ಪೋಷಣ ಅಭಿಯಾನ, ಉಜ್ವಲ ಯೋಜನೆ, ಪಿಎಂ ಗರೀಬ್ ಕಲ್ಯಾಣ ಅನ್ನ ಯೋಜನೆ, ಆಯುಷ್ಮಾನ್ ಆರೋಗ್ಯ ಯೋಜನೆ, ಪಿಎಂ ಸ್ವನಿಧಿ, ಫಸಲ ಬಿಮಾ ಯೋಜನೆ, ಸೇರಿದಂತೆ ವಿವಿಧ ಯೋಜನೆಗಳ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯಬೇಕು ಎಂಬ ಉದ್ದೇಶದಿಂದ ವಿಕಸಿತ ಭಾರತ ಸಂಕಲ್ಪಯಾತ್ರೆ ಪ್ರಾರಂಭಿಸಲಾಗಿದೆ. ಜಿಲ್ಲೆಯ229 ಗ್ರಾಮ ಪಂಚಾಯತಿಗಳ ಪೈಕಿ 215 ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ 18 ಕ್ರಾರ್ಯಕ್ರಮಗಳ ಪೈಕಿ ಈಗಾಗಲೇ 11 ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಲಾಗಿದೆಎಂದರು.

300x250 AD

ನಗರಸಭೆ ಪೌರಾಯುಕ್ತ ಚಂದ್ರಮೌಳಿ ಮಾತನಾಡಿ, ನಗರಸಭೆ ವತಿಯಿಂದ ನಗರ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಪಿಎಂ ಸ್ವನಿಧಿ, ಪಿಎಂ ವಿಶ್ವಕರ್ಮ ಯೋಜನೆ, ಉಜ್ವಲ, ಸ್ಟಾರ್ಟ್ ಅಪ್ ಇಂಡಿಯಾ, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಸೇವೆಯನ್ನು ಅರ್ಹರಿಗೆ ತಲುಪಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮನೋಜ ಬಾಂದೇಕರ, ಜಿ.ಪಂ. ಡಿಆರ್ಡಿಎ ಕರಿಂ ಅಸಾದಿ, ಕೆನರಾ ಬ್ಯಾಂಕ್ ಪ್ರದೇಶಿಕ ವ್ಯವಸ್ಥಾಪಕ ನಂದಕಿಶೋರ, ಸ್ಟೆಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ವ್ಯವಸ್ಥಾಪಕ ಪಿ.ಯು. ಪಾರಿ, ನಬಾರ್ಡ್ ಡಿಡಿಎಂ ರೇಜಿಸ್ ಇಮ್ಮಾನುವೆಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ ನಾಯ್ಕ, ಲೀಡ್ ಬ್ಯಾಂಕ್ ಅಧಿಕಾರಿ ವಾಸುದೇವ, ಅಂಚೆ ಇಲಾಖೆಯ ರಾಘವೇಂದ್ರ ಆಚಾರ್ಯ ಮತ್ತಿತ್ತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top