ಕಾರವಾರ: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಜನವರಿ 20 ಮತ್ತು 21 ರಂದು ಜಿಲ್ಲೆಯಲ್ಲಿ ನಡೆಯಲಿರುವ ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ಮುಂದಿನ ಸೂಚನೆಗಳನ್ನು ಪಾಲಿಸಬೇಕು. ಪರೀಕ್ಷಾ ದಿನಗಳಂದು ಬೆಳಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರದೊಳಗೆ ಶೂ, ಸಾಕ್ಸ್ ಗಳನ್ನು ಧರಿಸಲು ಅವಕಾಶವಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕಾಗಿರುತ್ತದೆ.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇಆಧುನಿಕ ಉಪಕರಣಗಳು, Mobile, Bluetooth, Calculator, White Fluid, Wireless Sets, Paper, Books Bricol ಹೋಗಲು ಅವಕಾಶವಿರುವುದಿಲ್ಲ. ತುಂಬು ತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು (Metal and Non metal) (ಮಂಗಳ ಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) pullovers, Jackets and Sweater ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಿದೆ. Metal Water Bottles or Non Transparent water bottle ಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ Filter ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಧಾರ್ಮಿಕ ಆಚರಣೆಗೆ ಸಂಬಂಧಿಸಿದ ವಸ್ತುಗಳನ್ನು ಧರಿಸಿ ಬರುವ ಅಭ್ಯರ್ಥಿಗಳು ಮತ್ತು Hearing aid ಉಪಕರಣ ಧರಿಸಿರುವ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕಾಗಿರುತ್ತದೆ. ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಈ ಎಲ್ಲಾ ಸೂಚನೆಗಳನ್ನು ತಪ್ಪದೇ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.