ಕಾರವಾರ: ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಕೂಲಿಕಾರರ ಮಕ್ಕಳಿಗೆ ಅನುಕೂಲವಾಗುವಂತೆ ಶಿಶುಪಾಲನಾ ಕೇಂದ್ರ ನಿರ್ಮಿಸಲಾಗಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡೆಯಬೇಕು ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಪಟಗಾರ ತಿಳಿಸಿದರು.
ಅವರು ಶುಕ್ರವಾರ ಕುಮಟಾ ತಾಲೂಕಿನ ಹೆಗಡೆ ಗ್ರಾಮ ಪಂಚಾಯತ ಮಾಸೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣವಾದ “ಕೂಸಿನ ಮನೆ”ಗೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳ ಆರೋಗ್ಯ,ಆಹಾರ, ಶಿಕ್ಷಣ, ಪೋಷಣೆ ಕುರಿತಾದ ಜಾಗೃತಿ ಮಾಡುವುದೇ ನಮ್ಮ ಶಿಶು ಪಾಲನಾ ಕೇಂದ್ರದ ಮುಖ್ಯ ಉದ್ದೇಶ, ನುರಿತ ತರಬೇತುದಾರರೇ ಮಕ್ಕಳ ಆರೈಕೆಯಲ್ಲಿ ತೊಡಗಿಕೊಳ್ಳುತ್ತಾರೆ. ಪೋಷಕರು ನಿರ್ಭಿತರಾಗಿ ಮಕ್ಕಳನ್ನು ಈ ಶಿಶು ಪಾಲನಾ ಕೇಂದ್ರದಲ್ಲಿ ಬಿಡಬಹುದಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಆರ್.ಎಲ್.ಭಟ್ ಮಕ್ಕಳನ್ನು ಬರಮಾಡಿಕೊಂಡರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿ. ಎ ಪಟಗಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೋವಿಂದ ಪಟಗಾರ್, ಅಂಗನವಾಡಿ ಮೇಲ್ವಿಚಾರಕಿ ಭಾರತಿ ಪಟಗಾರ್, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಕೇಶವ ನಾಯ್ಕ ಹಾಗೂ ಸಿಬ್ಬಂದಿಗಳು, ಐಇಸಿ ಸಂಯೋಜಕರಾದ ಪೂರ್ಣಿಮಾ ಗೌಡ, ತಾಂತ್ರಿಕ ಸಹಾಯಕರಾದ ನವೀನ್, ಗ್ರಾಮದ ಹಿರಿಯರು, ಹಾಜರಿದ್ದರು.