ಕಾರವಾರ: ತಾಲೂಕಿನ ಶೇಜವಾಡದ ಶ್ರೀ ಶೆಜ್ಜೇಶ್ವರ ದೇವಸ್ಥಾನದ ನೂತನ ದೇವಾಲಯ ನಿರ್ಮಾಣದ ಕುರಿತು ಚರ್ಚಿಸಲು ಜ.21ರಂದು ನಡೆಸಲು ಉದ್ದೇಶಿಸಲಾಗಿದ್ದ ವಿಶೇಷ ಸಭೆಯನ್ನು ಜ.28ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಪ್ರಕಟಣೆ ನೀಡಿದ್ದು ಅನಿವಾರ್ಯ ಕಾರಣಗಳಿಂದ ಇಂದಿನ ಸಭೆಯನ್ನು ಮುಂದೂಡಲಾಗಿದೆ. ಜ.28ರಂದು ಶಾಸಕ ಸತೀಶ ಸೈಲ್ ಉಪಸ್ಥಿತಿಯಲ್ಲಿ ಶ್ರೀ ಶೆಜ್ಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆಯ ಬಗ್ಗೆ, ಸರ್ಕಾರದ ಅನುದಾನ ಪಡೆಯುವ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಲಾಗಿದೆ.
ಜ.22ಕ್ಕೆ ವಿಶೇಷ ಪೂಜೆ: ಅಯೋಧ್ಯೆಯಲ್ಲಿ ಶ್ರೀ ರಾಮ ದೇವಾಲಯದ ಲೋಕಾರ್ಪಣೆ ನಿಮಿತ್ತ ಜ.22 ರಂದು ಶ್ರೀ ಶೆಜ್ಜೇಶ್ವರ ದೇವಸ್ಥಾನದಲ್ಲಿ ವಿಶೇಷವಾದ ಪೂಜೆ ಹಾಗು ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಪೂಜೆ & ಪ್ರಸಾದ ವಿತರಣೆ, ರಾತ್ರಿ ದೀಪ ಹಚ್ಚುವುದು, ಪೂಜೆ & ಪ್ರಸಾದ ವಿತರಣೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.