ಶಿರಸಿ: ಜಿ.ಐ.ಝಡ್, ಸ್ಕೋಡ್‌ವೆಸ್ (ರಿ.) ಸಂಸ್ಥೆ ಶಿರಸಿ ಇವರ ಸಹಯೋಗದಲ್ಲಿ, ಟಿ.ಆರ್.ಸಿ. ಸಹಕಾರದಲ್ಲಿ ‘ಸು-ಕೃಷಿ’ ಯೋಜನೆಯ ಉದ್ಘಾಟನೆ ಸಮಾರಂಭ ಕಾರ್ಯಕ್ರಮವನ್ನು ನಗರದ ಟಿಆರ್‌ಸಿ ಸಭಾಭವನದಲ್ಲಿ ಜ.30, ಮಂಗಳವಾರ ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.
ಶಾಸಕ ಭೀಮಣ್ಣ ನಾಯ್ಕ್ ಉದ್ಘಾಟಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ವಾಸುದೇವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ.ಹೊನ್ನಪ್ಪ ಗೌಡ, ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ವಿ.ದೇವಪ್ಪ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಡಾ.ಬಿ.ಪಿ.ಸತೀಶ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಉಮೇಶ ಕೊಂಡಿ, ಕೃಷಿ ಇಲಾಖೆ ಉಪನಿರ್ದೇಶಕ ಟಿ.ಹೆಚ್.ನಟರಾಜ್, ಕೆವಿಕೆ ಮುಖ್ಯಸ್ಥೆ ಡಾ.ರೂಪಾ ಪಾಟೀಲ್, ಟಿಆರ್‌ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ, ಟಿಎಸ್ಎಸ್ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೆಗಡೆ, ಕೃಷಿ ಸಲಹೆಗಾರ ರತಿಕಾಂತ್ ನಾಯಕ್ ಆಗಮಿಸಲಿದ್ದು, ಸ್ಕೊಡ್ವೇಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ವೆಂಕಟೇಶ್ ನಾಯ್ಕ್, ಸ್ಕೋಡ್‌ವೇಸ್ ಉಪಾಧ್ಯಕ್ಷ ಕುಮಾರ ಕೂರ್ಸೆ, ಕಾರ್ಯದರ್ಶಿ ಸರಸ್ವತಿ ಎನ್.ರವಿ, ಸದಸ್ಯ ಪ್ರೊ.ಕೆ. ಎನ್.ಹೊಸಮನಿ ಉಪಸ್ಥಿತರಿರಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಮಣ್ಣಿನ ತಜ್ಞ ಪಿ.ಶ್ರೀನಿವಾಸ್ ಆಗಮಿಸಲಿದ್ದು, ‘ಸುಸ್ಥಿರ ಕೃಷಿ ಮತ್ತು ಮಣ್ಣಿನ ಆರೋಗ್ಯ’ ವಿಷಯದ ಬಗ್ಗೆ ಮಾಹಿತಿ ನೀಡಲಿದ್ದು, ಸಾರ್ವಜನಿಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.