Slide
Slide
Slide
previous arrow
next arrow

ಬಿಜೆಪಿ ಜಿಲ್ಲಾ ಪ್ರಮುಖರ ಸಭೆ ಯಶಸ್ವಿ

300x250 AD

ಶಿರಸಿ: ಬಿಜೆಪಿ ಉತ್ತರಕನ್ನಡ ಜಿಲ್ಲಾ ಪ್ರಮುಖರ ಸಭೆಯು ಜ.23, ಮಂಗಳವಾರದಂದು ನಗರದಲ್ಲಿ ನಡೆಯಿತು. ಪಕ್ಷದ ಸಂರಚನೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನವ ಮತದಾರರ ಸಭೆ, ಗಾವ್ ಚಲೋ ಅಭಿಯಾನ, ಶಕ್ತಿ ವಂದನಾ ಅಭಿಯಾನ, ಗೋಡೆ ಬರಹ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಂಸದರಾದ ಅನಂತಕುಮಾರ ಹೆಗಡೆ, ಮಾಜಿ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ನಿಯೋಜಿತ ಜಿಲ್ಲಾಧ್ಯಕ್ಷರಾದ ಎನ್.ಎಸ್. ಹೆಗಡೆ ಕರ್ಕಿ, ಮಾಜಿ ಶಾಸಕರಾದ ಸುನಿಲ್ ಹೆಗಡೆ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಕೆ.ಜಿ. ನಾಯ್ಕ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ನಿಗಮದ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಶ್ರೀಮತಿ ಉಷಾ ಹೆಗಡೆ, ಗುರುಪ್ರಸಾದ ಹೆಗಡೆ ಹರ್ತೆಬೈಲ್ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top