Slide
Slide
Slide
previous arrow
next arrow

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

300x250 AD

ಕಾರವಾರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾದಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಗರದ ರಂಗಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ದೇಶದ ಬಂಡವಾಳಗಾರರು ಮತ್ತು ಕಾರ್ಪೋರೇಟ್ ಕಂಪನಿಗಳಿಗೆ 14.5 ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಗಿದೆ. 100 ಕೋಟಿ ರೂ. ಒಡೆತನವಿರುವ ಶ್ರೀಮಂತರಿಗೆ 2% ವಿಶೇಷ ತೆರಿಗೆಯನ್ನು ಹಾಕಿದರೆ 134 ಲಕ್ಷ ಕೋಟಿ ಸರ್ಕಾರಕ್ಕೆ ಆದಾಯ ತರಬಹುದಿತ್ತು. ಈ ಹಣದಲ್ಲಿ ಭಾರತದ 130 ಕೋಟಿ ಜನರಿಗೆ ಗುಣಮಟ್ಟದ ಆಹಾರ, ಆರೋಗ್ಯ ಮತ್ತು ಶಿಕ್ಷಣವನ್ನು ಉಚಿತವಾಗಿ ಮತ್ತು ಸಾರ್ವತ್ರಿಕವಾಗಿ ಕೊಡಬಹುದು ಮತ್ತು ಈ ಯೋಜನೆಗಳನ್ನು ಖಾಯಂ ಮಾಡಬಹುದು. ಬಡವರ ಮತ್ತು ಜನ ಸಾಮಾನ್ಯರ ಮೇಲೆ ತೆರಿಗೆ ಹಾಕುವ ಸರ್ಕಾರ ಶ್ರೀಮಂತರ ಮೇಲೆ ತೆರಿಗೆ ಹಾಕಲಿ ಎಂದು ಕಿಡಿಕಾರದರು.

ಮಿನಿ ಅಂಗನವಾಡಿ ಕೇಂದ್ರಗಳನ್ನು ಪೂರ್ಣ ಅಂಗನವಾಡಿ ಕೇಂದ್ರಗಳಾಗಿ ಪರಿವರ್ತಿಸಬೇಕು. ಅವರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ಕಡಿತವಾಗಿರುವ ಅನುದಾನಗಳನ್ನು ವಾಪಸ್ಸು ಕೊಟ್ಟು, ಬೆಲೆಯೇರಿಕೆ ಆಧಾರದಲ್ಲಿ ಪೂರಕ ಪೌಷ್ಠಿಕ ಆಹಾರಕ್ಕೆ ಕೊಡುವ ಹಣವನ್ನು ಹೆಚ್ಚಳ ಮಾಡಬೇಕು. 2022 ಏಪ್ರೀಲ್ ನಲ್ಲಿ ಸುಪ್ರೀಂð ಕೋರ್ಟ್ ಕೊಟ್ಟಿರುವ ತೀರ್ಪಿನಂತೆ ಎಲ್ಲ ಅಂಗನವಾಡಿ ನೌಕರರನ್ನು ಉದ್ಯೋಗಸ್ಥರೆಂದು ಪರಿಗಣಿಸಿ ಗ್ರಾಚ್ಯುಟಿ ಕಾಯ್ದೆಯನ್ನು ದೇಶದೆಲ್ಲೆಡೆ ಜಾರಿ ಮಾಡಬೇಕು. ವಿದ್ಯುತ್ ರೈಲ್ವೆ ಸೇರಿದಂತೆ ಯಾವುದೇ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಬೇಕು ಎಂದು ಒತ್ತಾಯಿಸಿದರು. 29 ಕಾರ್ಮಿಕ ಕಾನೂನುಗಳ ಸಂಹಿತೆಗಳಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು. ದೇಶದ ಎಲ್ಲಾ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಿ ಕೇಂದ್ರ ಸರ್ಕಾರ ವಾರ್ಷಿಕ ನಿವ್ವಳ ಆದಾಯದ ಶೇ. 3 ರಷ್ಟು ಅನುದಾನ ಅಂದರೆ 3 ಲಕ್ಷ ಕೋಟಿ ಹಣವನ್ನು ಅಸಂಘಟಿತ ಕಾರ್ಮಿಕರ ಕಾರ್ಯಕ್ರಮಗಳಿಗೆ ಘೋಷಿಸಬೇಕು. ಇ-ಶ್ರಮ್ ಯೋಜನೆಯಲ್ಲಿ ಗುರುತಿನ ಚೀಟಿ ಪಡೆದಿರುವ ಎಲ್ಲ ಅಸಂಘಟಿತ ಕಾರ್ಮಿಕರು ಹಾಗೂ ಅವರ ಕುಟುಂಬಗಳ ಸದಸ್ಯರಿಗೆ ಉಚಿತ ಶಿಕ್ಷಣ, ಆರೋಗ್ಯ, ಪಡಿತರ ಹಾಗೂ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು. ದೇಶದ ಎಲ್ಲ ರಾಜ್ಯಗಳಲ್ಲಿ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಬಜೆಟ್‌ನಲ್ಲಿ ಅನುದಾನ ಘೋಷಿಸಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು. ರಾಜ್ಯದಲ್ಲಿ ಕೆಲಸದ ಅವಧಿಯ ಹೆಚ್ಚಳವನ್ನು ತಂದಿರುವ ಕಾರ್ಖಾನೆ ಕಾಯ್ದೆ ತಿದ್ದುಪಡಿ ಕೈ ಬಿಡಬೇಕು. ಕೆಲಸದ ಅವಧಿ ಹೆಚ್ಚಿಸುವ, ಮಹಿಳೆಯರನ್ನು ರಾತ್ರಿಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ನೀಡುವುದು ಸೇರಿದಂತೆ ಎಲ್ಲ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಮನವಿ ಸ್ವೀಕರಿಸಿದರು.

300x250 AD
Share This
300x250 AD
300x250 AD
300x250 AD
Back to top