ಕಾರವಾರ: ಜಿಲ್ಲಾಡಳಿತದ ವತಿಯಿಂದ 75 ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಧ್ವಜಾರೋಹಣ ನೇರವೇರಿಸಿ, ಗಣರಾಜ್ಯೋತ್ಸವ ಕಾರ್ಯಕ್ರಮದ ಸಂದೇಶ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಸತೀಶ್ ಕೆ. ಸೈಲ್, ಆರ್. ವಿ. ದೇಶಪಾಂಡೆ, ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರು, ಶಾಂತಾರಾಮ ಬುಡ್ನಾ ಸಿದ್ದಿ, ಗಣಪತಿ ಉಳ್ವೇಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ.