ಕಾರವಾರ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳ ಲಿಖಿತ ಪರೀಕ್ಷೆಯು ಜನವರಿ 28 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ನಡೆಯಲಿದೆ.
ಸದ್ರಿ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನು ರೂಪಿಸಲಾಗಿದ್ದು ,ಅರ್ಧತೋಳಿನ ಶರ್ಟ್’ಗಳನ್ನು ಕಡ್ಡಾಯವಾಗಿ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್’ಗಳನ್ನುಧರಿಸಬೇಕು. ಜಿಪ್ ಪ್ಯಾಕೆಟ್’ಗಳು, ದೊಡ್ಡ ಬಟನ್’ಗಳಿರುವ ಶರ್ಟ್’ಗಳನ್ನು ಧರಿಸುವಂತಿಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆ (ಚಪ್ಪಲಿ) ಗಳನ್ನು ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಪೊಲೀಸ್ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.