Slide
Slide
Slide
previous arrow
next arrow

ಟಿಇಟಿ-ಸಿಇಟಿ ಮೂಲಕ 5ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ; ಸಚಿವ ಬಿ ಸಿ ನಾಗೇಶ್

300x250 AD

ಬೆಂಗಳೂರು: ರಾಜ್ಯದಲ್ಲಿ ಟಿಇಟಿ ಮತ್ತು ಸಿಇಟಿ ಮೂಲಕ ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.

ಈ ನೇಮಕಾತಿ ಪ್ರಕ್ರಿಯೆಯಿಂದ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತಷ್ಟು ಸುಧಾರಣೆಯಾಗಲಿವೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆ ಇದ್ದು, ಅದನ್ನು ನೀಗಿಸುವ ನಿಟ್ಟಿನಲ್ಲಿ ಈ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

300x250 AD

ಈ ಹಿಂದೆ ಮಾಜಿ ಸಚಿವ ಸುರೇಶ್ ಕುಮಾರ್ ಅವರ ಅವಧಿಯಲ್ಲಿ ಹತ್ತು ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಮೂರು ಸಾವಿರ ಶಿಕ್ಷಕರು ಅರ್ಹತೆ ಪಡೆದುಕೊಂಡಿದ್ದರು. ಆ ಬಳಿಕ ಕೊರೋನಾ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ಸ್ಥಗಿತವಾಗಿತ್ತು. ಈ ಬಾರಿ ಇದಕ್ಕೆ ಮತ್ತೆ ಚಾಲನೆ ನೀಡಲಾಗಿದ್ದು, 5 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Share This
300x250 AD
300x250 AD
300x250 AD
Back to top