Slide
Slide
Slide
previous arrow
next arrow

ಜ.25ಕ್ಕೆ ರಾಷ್ಟ್ರೀಯ ಮತದಾರರ ದಿನಾಚರಣೆ

300x250 AD

ಕಾರವಾರ: ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಜನವರಿ 25 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ 2ನೇ ಹೆಚ್ಚುವರಿ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ದೇವಿದಾಸ್ ರಾಯ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ಈಶ್ವರಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 7 ರಿಂದ 9 ರ ವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಂಗೋಲಿ ಸ್ಪರ್ಧೆ ನಡೆಯಲಿದ್ದು, ಸಂಜೆ 5.30 ರಿಂದ ರವೀಂದ್ರನಾಥ ಠಾಗೂರ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಬೀದಿ ನಾಟಕ, ಜಾನಪದಗೀತೆ, ರಸಮಂಜರಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

300x250 AD
Share This
300x250 AD
300x250 AD
300x250 AD
Back to top