Slide
Slide
Slide
previous arrow
next arrow

ಸಿದ್ದಿ ಸಮುದಾಯದ ರೈತರಿಂದ ಅರ್ಜಿ ಆಹ್ವಾನ

300x250 AD

ಕಾರವಾರ: ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡದ ಅರ್ಹ ಸಿದ್ದಿ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಾಲಿ/ನೆರಳು ಮನೆ ನಿರ್ಮಾಣದ ಮಾಡುವ ಘಟಕ ವೆಚ್ಚ 19,11,250 ಫಲಾನುಭವಿಗಳ ವಂತಿಕೆ 2,11,000 ಪಡೆದು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸರ್ಕಾರಿ ಷರತ್ತಿಗೊಳಪಟ್ಟು ಆಸಕ್ತ ಅರ್ಜಿದಾರರಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡದ ಅರ್ಹ ಸಿದ್ದಿ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರು ನಿಗಧಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು. (ಗ್ರೇಡ್-1/2) ಸಮಾಜ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಕಾರವಾರ ಇವರಿಂದ ಪಡೆದು, ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲಾತಿಯೊಂದಿಗೆ ಫೆ.2 ರ ಸಂಜೆ 5:30 ರೊಳಗೆ ಸಂಬಂಧಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ ಕಾರವಾರ (ದೂ: TEL:+9108382226575) ಇಲ್ಲಿ ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top