Slide
Slide
Slide
previous arrow
next arrow

ಹೆಣ್ಣುಮಕ್ಕಳನ್ನು ಪ್ರೋತ್ಸಾಹಿಸಿ: ಡಿಸಿ ಗಂಗೂಬಾಯಿ ಮಾನಕರ

300x250 AD

ಕಾರವಾರ: ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಇಬ್ಬರೂ ಸಮಾನರಾಗಿದ್ದು, ಹೆಣ್ಣುಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಯೊಬ್ಬರೂ ಎಲ್ಲಾ ರೀತಿಯ ಪ್ರೋತ್ಸಾಹ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು. ಅವರು ಬುಧವಾರ ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಅಂಗವಾಗಿ ಕ್ರಿಮ್ಸ್ನಲ್ಲಿ ಜನಿಸಿದ್ದ ಹೆಣ್ಣುಮಕ್ಕಳ ತಾಯಂದಿರನ್ನು ಅಭಿನಂದಿಸಿ, ಸಿಹಿ ವಿತರಿಸಿ ಮಾತನಾಡಿದರು.
ಹೆಣ್ಣು ಮತ್ತು ಗಂಡುಮಕ್ಕಳ ನಡುವೆ ಪೋಷಕರು ಭೇದಮಾಡಬಾರದು. ಹೆಣ್ಣು ಮಕ್ಕಳು ಇಂದು ಎಲ್ಲಾ ಕ್ಷೇತ್ರದಲ್ಲಿ ಪುರುಷರಿಗೆ ಸಮಾನವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತಿದ್ದಾರೆ. ಆದ್ದರಿಂದ ಹೆಣ್ಣುಮಕ್ಕಳ ಪೋಷಕರು ಹಿಂದಿನಂತೆ ಹೆಣ್ಣುಮಗು ಆಯಿತು ಎಂದು ನಿರಾಶೆ ಪಡಬಾರದು ಮತ್ತು ಕೊರಗಬಾರದು. ತಮ್ಮ ಹೆಣ್ಣುಮಕ್ಕಳಿಗೆ ಎಲ್ಲಾ ಕ್ಷೇತ್ರದಲ್ಲೂ ಬೆಳೆಯಲು ಸೂಕ್ತ ಪ್ರೋತ್ಸಾಹ ಮತ್ತು ಬೆಂಬಲ ನೀಡಬೇಕು, ಹೆಣ್ಣು ಮತ್ತು ಗಂಡಿನ ನಡುವೆ ಸಮಾನತೆ ಮೂಡಬೇಕು ಎಂದರು. ನವಜಾತು ಹೆಣ್ಣುಶಿಶುವನ್ನು ಸ್ವತ: ಎತ್ತಿಕೊಂಡ ಜಿಲ್ಲಾಧಿಕಾರಿಗಳು ಮಗುವಿನ ಮತ್ತು ತಾಯಿಯ ಆರೋಗ್ಯವನ್ನು ವಿಚಾರಿಸಿ, ಹೆಣ್ಣುಮಕ್ಕಳು ಎಂದರೆ ನನಗೆ ತುಂಬಾ ಪ್ರೀತಿ ಏಕೆಂದರೆ ನನಗೂ ಒಬ್ಬಳೇ ಹೆಣ್ಣುಮಗಳಿದ್ದಾಳೆ ಎಂದರು. ಈ ಸಂದರ್ಭದಲ್ಲಿ ಕ್ರಿಮ್ಸ್ ಆಸ್ಪತ್ರೆಯ ಹೆರಿಗೆ ಕೊಠಡಿಯಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ವೈದ್ಯರು ಮತ್ತು ಮಹಿಳಾ ಸಿಬ್ಬಂದಿಗಳಿಗೂ ಸಹ ರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಹೆಚ್.ಹೆಚ್.ಕುಕನೂರು ಮತ್ತು ಕಿಮ್ಸ್ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top