ಬನವಾಸಿ: ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಗುರುವಾರ ಆಚರಿಸಲಾಯಿತು.
ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಬೋಧಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಮತದಾರರ ಸಾಕ್ಷರತಾ ಕ್ಲಬ್ ನ ಸಂಚಾಲಕಿ ಪ್ರಭಾವತಿ ಹೆಗಡೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಚಾರ್ಯ ಎಂ. ಕೆ. ನಾಯ್ಕ ಹೊಸಳ್ಳಿ ಮತ್ತು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು “ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದೊಂದಿಗೆ ಜಾಥಾದಲ್ಲಿ ಪಾಲ್ಗೊಂಡರು. ಬನವಾಸಿಯ ಮುಖ್ಯ ಬೀದಿಯಲ್ಲಿ ಸಂಚರಿಸಿ ಜಾಗೃತಿಯ ಘೋಷಣೆಗಳನ್ನು ಕೂಗಿ ಮೆರವಣಿಗೆ ನಡೆಸಲಾಯಿತು.