ಸಿದ್ದಾಪುರ: ಇಲ್ಲಿನ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ತಹಸೀಲ್ದಾರ ಎಂ.ಆರ್.ಕುಲಕರ್ಣಿ ಉದ್ಘಾಟಿಸಿ ಮತದಾನದ ಮಹತ್ವ,ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಸರ್ವರ ಪಾಲ್ಗೊಳ್ಳುವಿಕೆ ಕುರಿತು ಮಾಹಿತಿ ನೀಡಿದರು. ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ಬಿಇಒ ಜಿ.ಐ.ನಾಯ್ಕ, ಪಟ್ಟಣದ ಹಾಳದಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಿ.ಎಸ್.ಹೆಗಡೆ, ಸಿಡಿಪಿಒ ಪೂರ್ಣಿಮಾ, ಪಟ್ಟಣ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳು, ಯುವ ಮತದಾರರು,ಕಚೇರಿ ಸಿಬ್ಬಂದಿಗಳಿದ್ದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.