Slide
Slide
Slide
previous arrow
next arrow

ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಎಲ್ಲಾ ಅರ್ಹರಿಗೆ ತಲುಪಿಸಿ : ಸಚಿವ ಮಂಕಾಳ ವೈದ್ಯ

300x250 AD

ಕಾರವಾರ: ರಾಜ್ಯ ಸರ್ಕಾರದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಎಲ್ಲಾ ಅರ್ಹ ವ್ಯಕ್ತಿಗಳಿಗೆ ತಲುಪಿಸಿ ಜಿಲ್ಲೆಯಲ್ಲಿ ಈ ಯೋಜನೆಗಳ ಸಂಪೂರ್ಣ ಗುರಿ ಸಾಧಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಶೇ.88 ರಷ್ಟು ಸಾಧನೆಯಾಗಿದ್ದು, ಬಾಕಿ ಉಳಿದ ಅರ್ಹ 19,202 ಮಹಿಳೆಯನ್ನು ಈ ಯೋಜನೆಯ ವ್ಯಾಪ್ತಿಗೆ ಒಳಪಡಿಸಿ, ಬಾಕಿ ಉಳಿದ ಎಲ್ಲಾ ಮನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸಂಪರ್ಕಿಸಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸುವಂತೆ ತಿಳಿಸಿದ ಸಚಿವರು, ಒಂದು ವಾರದ ಒಳಗೆ ಎಲ್ಲಾ ಮನೆಗಳನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗೆ ಸೂಚಿಸಿದರು. ಗೃಹಜ್ಯೋತಿ ಯೋಜನೆಯಡಿ ಶೇ.96 ರಷ್ಟು ಸಾಧನೆ ಆಗಿದ್ದು, ಬಾಕಿ ಉಳಿದ ಫಲಾನುಭವಿಗಳನ್ನು ಸೇರ್ಪಡೆಗೊಳಿಸಿ ಶೇ.100 ಗುರಿ ಸಾಧಿಸುವಂತೆ ತಿಳಿಸಿದ ಸಚಿವರು, ಜಿಲ್ಲೆಯಲ್ಲಿ ಪವರ್ ಕಟ್ ಸಮಸ್ಯೆಯಾಗದಂತೆ ನೋಡಿಕೊಳ್ಳಿ, ದೇಶಕ್ಕೆ ವಿದ್ಯುತ್ ಸರಬರಾಜು ಮಾಡುವ ನಮ್ಮ ಜಿಲ್ಲೆಯಲ್ಲಿ ಪವರ್ ಕಟ್ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳಿ ಎಂದರು. ಯುವನಿಧಿ ಯೋಜನೆಯಲ್ಲಿ ಇದುವರೆಗೆ 2537 ಮಾತ್ರ ನೋಂದಣಿಯಾಗಿದ್ದು, ಜಿಲ್ಲೆಯ ಕಾಲೇಜುಗಳಲ್ಲಿ 2023ರಲ್ಲಿ ಉತ್ತಿರ್ಣರಾದ ವಿದ್ಯಾರ್ಥಿಗಳ ವಿಳಾಸದ ಪಟ್ಟಿ ಪಡೆದು ಪ್ರತಿಯೊಬ್ಬರಿಗೂ ಯೋಜನೆಯ ಮಾಹಿತಿ ಮತ್ತು ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ವೈಯಕ್ತಿಕವಾಗಿ ಪತ್ರ ಕಳಿಸಿ, ನೋಂದಣಿಗೆ ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು. ಎಲ್ಲಾ 5 ಗ್ಯಾರಂಟಿ ಯೋಜನೆಗಳ ನೋಂದಣಿಯಲ್ಲಿನ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರು ಸಂಪರ್ಕಿಸಲು ಅನುಕೂಲವಾಗುವಂತೆ 24*7 ಕಾರ್ಯ ನಿರ್ವಹಿಸುವ ಕೇಂದ್ರವನ್ನು ತೆರೆಯವಂತೆ ಮತ್ತು ಸಲ್ಲಿಕೆಯಾದ ದೂರುಗಳನ್ನು ತಕ್ಷಣವೇ ಬಗೆಹರಿಸಿ, ಜಿಲ್ಲೆಯ ಎಲ್ಲಾ ಅರ್ಹ ಫಲಾನುಭಿಗಳಿಗೆ ಯೋಜನೆಗಳ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಿ ಎಂದರು.
ಬರ ನಿರ್ವಹಣೆ ಕುರಿತಂತೆ ಜಿಲ್ಲೆಯ ಯಾವುದೇ ನಾಗರಿಕರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಸಾಕಷ್ಟು ಮುಂಚಿತವಾಗಿ ಯೋಜನೆ ರೂಪಿಸಿಕೊಳ್ಳಿ, ಕುಡಿಯುವ ನೀರಿನ ವಿಷಯದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಬೆಳೆ ಪರಿಹಾರದ ಮೊತ್ತ ಎಲ್ಲಾ ರೈತರಿಗೆ ತಲುಪುತ್ತಿರುವ ಕುರಿತಂತೆ ಪರಿಶೀಲಿಸಿ, ಬೆಳೆ ವಿಮೆ ಮೊತ್ತ ರೈತರ ಖಾತೆಗೆ ಸಮರ್ಪಕವಾಗಿ ಜಮೆಯಾಗುವಂತೆ ನೋಡಿಕೊಳ್ಳಿ ಎಂದು ಕೃಷಿ ಮತ್ತುತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ಅನುಷ್ಠಾನ ಇಲಾಖೆಗಳಿಗೆ, ವಿವಿಧ ಕಾಮಗಾರಿಗನ್ನು ಕೈಗೊಳ್ಳಲು ಬಿಡುಗಡೆಯಾಗಿರುವ ಅನುದಾನವನ್ನು ಸಂಪೂರ್ಣ ವೆಚ್ಚ ಮಾಡಿ, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಿ. ನಾನು ಗುದ್ದಲಿ ಪೂಜೆ ಸಿಸ್ಟಂನಲ್ಲಿ ಇಲ್ಲ, ಸಚಿವರು ಗುದ್ದಲಿ ಪೂಜೆ ಮಾಡಲಿ ಎಂದು ಸಮಯ ವ್ಯರ್ಥ ಮಾಡಬೇಡಿ. ಟೆಂಡರ್ ಪ್ರಕ್ರಿಯೆ ಮುಗಿದು, ಕಾಮಗಾರಿಗಳಿಗೆ ಕಾರ್ಯಾದೇಶ ದೊರೆತ ಕೂಡಲೇ ಕಾಮಗಾರಿಗಳನ್ನು ಆರಂಭಿಸಿ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ಒದಗಿಸಿ. ಯಾವುದೇ ಕಾರಣಕ್ಕೂ ಅನುದಾನವನ್ನು ವ್ಯರ್ಥ ಮಾಡಬೇಡಿ, ಜಿಲ್ಲೆಯ ಅಭಿವೃಧ್ದಿ ಕಾಮಗಾರಿಗಳು ಕುಂಠಿತವಾಗಲು ಬಿಡಬೇಡಿ ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಹಿರಿಯ ನಾಗರೀಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸಹಾಯವಾಣಿ ಕೇಂದ್ರ ಮತ್ತು ಆರೈಕೆ ಕೇಂದ್ರಗಳನ್ನು ಆರಂಭಿಸುವ ಕುರಿತಂತೆ ತಕ್ಷಣ ಕ್ರಮ ಕೈಗೊಳ್ಳಿ ಎಂದರು.
ಬೀಡಾಡಿ ದನಗಳನ್ನು ನಿಯಂತ್ರಿಸಲು ಮತ್ತು ಅವುಗಳನ್ನು ಗೋಶಾಲೆಗಳಲ್ಲಿ ಮತ್ತು ಪ್ರತ್ಯೇಕ ಸ್ಥಳಗಳಲ್ಲಿ ಬಿಡಲು ಸೂಕ್ತ ಜಾಗ ಗುರ್ತಿಸಿ, ಬೀದಿ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಕೈಗೊಂಡು ಬೀದಿ ನಾಯಿಗಳ ಸಂಖ್ಯೆಯ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದರು.
ಜಿಲ್ಲೆಯಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ಶೇ.78 ನೋಂದಣಿ ಪ್ರಗತಿಯಾಗಿದೆ. ಈಗಾಗಲೇ 2 ಹಂತದಲ್ಲಿ ಬೆಳೆ ಪರಿಹಾರ ರೈತರ ಖಾತೆಗಳಿಗೆ ಜಮೆಯಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಬಹುದಾದ ಗ್ರಾಮಗಳನ್ನು ಗುರುತಿಸಿದ್ದು, ಅಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದಿಂದ ಬಿಡುಗಡೆಯಾಗಿರುವ ಬರ ಪರಿಹಾರದ ಮೊತ್ತವನ್ನು ಎಲ್ಲಾ ತಾಲೂಕುಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top