Slide
Slide
Slide
previous arrow
next arrow

ಸಂವಿಧಾನ ಗೌರವಿಸುವುದು ಪ್ರತಿ ಪ್ರಜೆಯ ಆದ್ಯ ಕರ್ತವ್ಯ: ಎಂ. ಗುರುರಾಜ

300x250 AD

ಯಲ್ಲಾಪುರ: ಆಡಳಿತಕ್ಕೊಂದು ಶಿಸ್ತು ರೂಪಿಸುವ ಸಂವಿಧಾನವನ್ನು ಅನುಸರಿಸುವುದು, ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಹಸೀಲ್ದಾರ ಎಂ. ಗುರುರಾಜ ಹೇಳಿದರು.

ಅವರು ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂವಿಧಾನದ ಆಶಯಗಳನ್ನು ಅರಿತು, ಈ ನೆಲದ ಸಂಸ್ಕೃತಿ, ಕಾನೂನನ್ನು ಪ್ರತಿಯೊಬ್ಬ ಪ್ರಜೆಯೂ ಪಾಲನೆ ಮಾಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ದೇಶದ ಪ್ರಗತಿಗೆ ಸುಭದ್ರ ಅಡಿಪಾಯ ಹಾಕಿಕೊಟ್ಟ ಸಂವಿಧಾನ ಜಾರಿಗೆ ತರುವಲ್ಲಿ ಅಂಬೇಡ್ಕರ್ ಹಾಗೂ ಅನೇಕ ಮಹನೀಯರು ಶ್ರಮಿಸಿದ್ದಾರೆ. ಅವರನ್ನು ಸ್ಮರಿಸುವ ಜೊತೆಗೆ, ಅವರ ಆದರ್ಶಗಳನ್ನು ಪಾಲಿಸಬೇಕು ಎಂದರು.

300x250 AD

ಪ್ರಸಿದ್ಧ ಗಾಯಕ ಪಂ.ಗಣಪತಿ ಭಟ್ಟ ಹಾಸಣಗಿ, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯ ಡಾ.ನಾಗರಾಜ.ಬಿ.ಎಚ್ ಹಾಗೂ ನಾಟಿ ವೈದ್ಯ ನಾರಾಯಣ ಹೆಗಡೆ ಗವೆಗುಳಿ ಅವರನ್ನು ಗೌರವಿಸಲಾಯಿತು. ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ಶ್ರೀದೇವಿ ನಾಯಕ ಹಾಗೂ ಜಯಶ್ರೀ ಮೈಲಾರ ಅವರನ್ನು ಪುರಸ್ಕರಿಸಲಾಯಿತು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ ಹೆಗಡೆ, ಪ.ಪಂ ಸದಸ್ಯರಾದ ಸುನಂದಾ ದಾಸ್, ಜ್ಯೋತಿ ನಾಯ್ಡು, ಸಿಪಿಐ ರಂಗನಾಥ ನೀಲಮ್ಮನವರ್, ಲೋಕೋಪಯೋಗಿ ಇಲಾಖೆಯ ಎಇಇ ವಿ.ಎಂ.ಭಟ್ಟ, ಬಿಇಒ ಎನ್.ಆರ್.ಹೆಗಡೆ, ಪ.ಪಂ ಮುಖ್ಯಾಧಿಕಾರಿ ಸುನೀಲ ಗಾವಡೆ, ತಾ.ಪಂ ಇಒ ನಾಗರಾಜ ನಾಯ್ಕ ಇತರರಿದ್ದರು. ಭಾರತ ಸೇವದಾಳದ ಸಂಘಟಕ ಸಂಜೀವಕುಮಾರ ಹೊಸ್ಕೇರಿ, ಯುವಜನ ಸೇವಾ ಕ್ರೀಡಾಧಿಕಾರಿ ನಾರಾಯಣ ನಾಯಕ, ಐಇಆರ್.ಟಿ ದಿಲೀಪ ದೊಡ್ಡಮನಿ ನಿರ್ವಹಿಸಿದರು. ವಿವಿಧ ಶಾಲಾ ವಿದ್ಯಾರ್ಥಿಗಳು, ಎನ್.ಸಿ.ಸಿ, ಭಾರತ ಸೇವಾದಳ, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

Share This
300x250 AD
300x250 AD
300x250 AD
Back to top