Slide
Slide
Slide
previous arrow
next arrow

ಹಳಿಯಾಳದ ವಿಡಿಐಟಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

300x250 AD

ಹಳಿಯಾಳ: ಕೆಎಲ್ಎಸ್ ವಿಡಿಐಟಿ ಹಳಿಯಾಳದಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹ ಪ್ರಾಧ್ಯಾಪಕ ಪ್ರೊ. ಗುರುರಾಜ ಸತ್ತಿಗೇರಿ ಧ್ವಜಾರೋಹಣ ಮಾಡಿ ಮಾತನಾಡುತ್ತ, ಸ್ವತಂತ್ರ ಭಾರತ ದೇಶಕ್ಕೆ ಹೊಸ ಭಾಷೆ ಬರೆದ ಸಂವಿಧಾನ ಅಂಗೀಕೃತವಾದ ದಿನವನ್ನು ಗಣರಾಜ್ಯೋತ್ಸವವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು. ಸಂವಿಧಾನ ರಚನೆಯ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜೊತೆ ಕೈಜೋಡಿಸಿದ ಮಹನೀಯರ ಸ್ಮರಿಸುತ್ತ, ಸಂವಿಧಾನ ರಚನೆಯಾದ ಪರಿಯನ್ನು ವಿವರಿಸಿದರು. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಗಣರಾಜ್ಯದ ಅಮೃತ ಮಹೋತ್ಸವ ವರ್ಷದ ಶುಭಾಶಯ ತಿಳಿಸುತ್ತ ಮಾತನಾಡಿದ ಪ್ರಾಚಾರ್ಯ ಡಾ.ವಿ.ಎ.ಕುಲಕರ್ಣಿ ಸಂವಿಧಾನ ನಮಗೆ ನೀಡಿರುವ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ದೇಶದ ಅಭಿವೃದ್ಧಿಗೆ ಪಾತ್ರರಾಗಬೇಕೆಂದು ಹೇಳಿದರು. ಸಮಾಜದ ಸ್ವಾಸ್ಥ್ಯ ಕಾಪಾಡಲು ಪ್ರತಿಯೊಬ್ಬರು ಸಂವಿಧಾನದ ಪರಿಪಾಲನೆ ಮಾಡಬೇಕೆಂದು ಹೇಳಿದರು. ಗಣರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಗೂ ನೃತ್ಯ ರೂಪಕವನ್ನು ಸಾದರಪಡಿಸಿದರು. ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜಯಶಾಲಿಯಾಗಿದ್ದ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಸಾಂಸ್ಕೃತಿಕ ಕ್ಲಬ್ ನ ನೂತನ ಚಿನ್ಹೆಯನ್ನು ಅನಾವರಣಗೊಳಿಸಲಾಯಿತು. ಗಣರಾಜ್ಯೋತ್ಸವದ ಈ ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಮಾಜಿ ವಿದ್ಯಾರ್ಥಿ ಕ್ಯಾಪ್ಟನ್ ಅಭಯ ಪಂಡಿತ್ ಗಣರಾಜ್ಯೋತ್ಸವದ ಪ್ರಯುಕ್ತ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಪ್ರದರ್ಶನದಲ್ಲಿ ನಾಗಾ ಕ್ಷಿಪಣಿಯ ನೇತೃತ್ವ ವಹಿಸಿಕೊಂಡಿದ್ದರು. ಮಹಾವಿದ್ಯಾಲಯದ ಮಾಜಿ ವಿದ್ಯಾರ್ಥಿ ಕ್ಯಾಪ್ಟನ್. ಅಭಯ ಪಂಡಿತ್ ಈ ಸಾಧನೆ ಮಹಾವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಪ್ರಾಚಾರ್ಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top