Slide
Slide
Slide
previous arrow
next arrow

ಹಿರೇಗುತ್ತಿ ಹೈಸ್ಕೂಲ್‌ನಲ್ಲಿ ಗಣರಾಜ್ಯೋತ್ಸವ ಸಂಭ್ರಮ

300x250 AD

ಕುಮಟಾ: ತಾಲೂಕಿನ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲ್‌ನಲ್ಲಿ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಸದಸ್ಯರಾದ ಮೋಹನ ಯು. ಗಾಂವಕರ 75 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.  ನಂತರ ಮಾತನಾಡಿ, ದೇಶ ನಮಗೇನು ಮಾಡಿದೆ ಎನ್ನುವುದಕ್ಕಿಂತ ನಾವು ದೇಶಕ್ಕಾಗಿ ಏನು ಮಾಡಿದ್ದೇವೆ, ದೇಶ ನಮ್ಮಿಂದ ಏನನ್ನು ನಿರೀಕ್ಷಿಸುತ್ತದೆ ಎಂಬ ಕಲ್ಪನೆ ನಮ್ಮಲ್ಲಿ ಮೂಡಿ ಕಾರ್ಯ ಕೈಗೊಂಡು ಗುರಿ ತಲುಪಿದಾಗ ಮಾತ್ರ ಗಣರಾಜ್ಯೋತ್ಸವದ ಸಾರ್ಥಕತೆ ಸಾಧ್ಯ ಎಂದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ ಮಾತನಾಡಿ, ಭಾರತವು ಜಗತ್ತಿನಲ್ಲಿಯೇ ಅತೀ ಉತ್ಕೃಷ್ಟ ಲಿಖಿತ ಸಂವಿಧಾನವನ್ನು ಹೊಂದಿದ ದೇಶ ಎಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್.ರಾಮು.ಹಿರೇಗುತ್ತಿ, ವಿದಾರ್ಥಿಗಳು ಉತ್ತಮ ವ್ಯಕ್ತಿತ್ವ ಹೊಂದಿ ಸತ್ಪ್ರಜೆಯಾಗಿ ದೇಶದ ಭವಿಷ್ಯ ರೂಪಿಸುವಂತಾಗಲಿ ಎಂದರು. ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಸೆಕ್ರೆಟರಿ ಮೋಹನ ಬಿ. ಕೆರೆಮನೆ ಮಾತನಾಡಿ, ನಮ್ಮ ದೇಶದ ಭವ್ಯ ಪರಂಪರೆಯನ್ನು ಸ್ಮರಿಸೋಣ ಪ್ರಜ್ವಲಿಸುತ್ತಿರುವ ಭಾರತದ ಭಾಗವಾಗೋಣ. ನಮ್ಮದು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ, ಪ್ರಜಾಸತಾತ್ಮಕ ಗಣರಾಜ್ಯವಾಗಿದೆ. ಎಂದರು. ಮುಖ್ಯಾಧ್ಯಾಪಕರಾದ ರೋಹಿದಾಸ ಎಸ್ ಗಾಂವಕರ ಮಾತನಾಡಿ, ಗಣರಾಜ್ಯೋತ್ಸವದ ಧೈಯೋದ್ಧೇಶಗಳನ್ನು, ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಳ್ಳಬೇಕೆಂದರು.

ದೈಹಿಕ ಶಿಕ್ಷಕ ನಾಗರಾಜ ನಾಯಕ ಉಸ್ತುವಾರಿಯಲ್ಲಿ ಧ್ವಜವಂದನೆ ಹಾಗೂ ಆಕರ್ಷಕ ಪ್ರಭಾತಪೇರಿ ನಡೆಯಿತು. ಕಾರ್ಯಕ್ರಮದಲ್ಲಿ ಅನಂತ ನಾಯ್ಕ ಹೆಗಡೆ ಕುಮಟಾ, ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀಕಾಂತ ನಾಯಕ, ಸದಸ್ಯರಾದ ರಮಾನಂದ ಪಟಗಾರ, ಹಿರೇಗುತ್ತಿ ಕಾಲೇಜ್ ಪ್ರಿನ್ಸಿಪಾಲ್ ನಾಗರಾಜ ಗಾಂವಕರ, ಶಿಕ್ಷಕರಾದ ವಿಶ್ವನಾಥ ಪಿ ಬೇವಿನಕಟ್ಟಿ, ಬಾಲಚಂದ್ರ ಹೆಗಡೇಕರ್, ಎನ್.ರಾಮು.ಹಿರೇಗುತ್ತಿ, ಮಹಾದೇವ ಗೌಡ, ಬಾಲಚಂದ್ರ ಅಡಿಗೋಣ, ಇಂದಿರಾ ನಾಯಕ, ಜಾನಕಿ.ಎಮ್.ಗೊಂಡ, ಶಿಲ್ಪಾ ನಾಯಕ,ಮದನ ನಾಯಕ, ಕವಿತಾ ಅಂಬಿಗ, ಗೋಪಾಲಕೃಷ್ಣ ಗುನಗಾ, ಗೋವಿಂದ ನಾಯ್ಕ ಹಾಗೂ ಮಹಾತ್ಮಾಗಾಂಧಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಶಿಕ್ಷಕರಾದ ತನುಜಾ ಹರಿಕಂತ್ರ, ನಾಗರತ್ನ, ಮಂಗಲಾ ಪಟಗಾರ ಉಪಸ್ಥಿತರಿದ್ದರು.

300x250 AD

ಕಾರ್ಯಕ್ರಮವು ಚೈತನ್ಯ ಸಂಗಡಿಗರ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭವಾಯಿತು. ಸುವರ್ಣ ಭಂಡಾರಕರ್ ಸರ್ವರನ್ನೂ ಸ್ವಾಗತಿಸಿದರೆ, ವಿದ್ಯಾರ್ಥಿ ಪ್ರತಿನಿಧಿ ಶಿವಪ್ರಸಾದ ನಾಯಕ ಕಾರ್ಯಕ್ರಮದ ನಿರೂಪಣೆ ಮಾಡಿದರು. ಪ್ರೀತಿ ನಾಯಕ ವಂದಿಸಿದರು.

Share This
300x250 AD
300x250 AD
300x250 AD
Back to top