Slide
Slide
Slide
previous arrow
next arrow

ಪೂರ್ವಜರ ಬಲಿದಾನ ಸ್ಮರಿಸಬೇಕು: ಶಾಸಕ ಭೀಮಣ್ಣ

300x250 AD

ಶಿರಸಿ: ದೇಶದ ಸಮಗ್ರ ಅಭಿವೃದ್ಧಿ ಸಾಧನೆಗಾಗಿ ದೇಶವಾಸಿಗಳೆಲ್ಲರೂ ಜಾತಿ-ಮತ ಬದಿಗಿಟ್ಟು ಒಗ್ಗೂಡಿ ಹೆಜ್ಜೆಯನ್ನಿಡಬೇಕೆಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಅವರು 75 ನೇ ಗಣರಾಜ್ಯೋತ್ಸವದ ನಿಮಿತ್ತ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಕೋರಿ ಮಾತನಾಡಿದರು. ದೇಶದ ಎಲ್ಲರ ಜನರಿಗೆ ಸಮಾನತೆಯನ್ನು ಕಲ್ಪಿಸುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ ನೇತೃತ್ವದಲ್ಲಿ ರಚಿತವಾದ ಸಂವಿಧಾನವು ಮಹತ್ವದ ಪಾತ್ರ ವಹಿಸಿದೆ. ನಮ್ಮ ಪೂರ್ವಜರ ತ್ಯಾಗ-ಬಲಿದಾನವನ್ನು ಈ ಸಮಯದಲ್ಲಿ ಸ್ಮರಿಸುವುದರ ಮೂಲಕ ಎಲ್ಲ ಮಹನೀಯರಿಗೆ ಗೌರವ ಸಲ್ಲಿಸಬೇಕಿದೆ ಎಂದರು. ಬಡವರ ಪರವಾದ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಗ್ಯಾರಂಟಿಗಳ ಮೂಲಕ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸರಕಾರದ ಜೊತೆಗೆ ನಾವೆಲ್ಲರೂ ಕೈಜೋಡಿಸಬೇಕಿದೆ ಎಂದು ಅವರು ಕರೆ ನೀಡಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಹಾಯಕ ಆಯುಕ್ತೆ ಅಪರ್ಣಾ ರಮೇಶ, ದೇಶದ ಪ್ರಗತಿಯಲ್ಲಿ ಕರ್ನಾಟಕ ರಾಜ್ಯದ ಪಾತ್ರ ಮಹತ್ವದ್ದಾಗಿದೆ. ಜಿಡಿಪಿ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯದ ಕೊಡುಗೆ ಗಮನಾರ್ಹವಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಜೊತೆಯಾಗಲಿ ಎಂದರು.

300x250 AD

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಆಕರ್ಷಣೀಯ ಸಂಚಲನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಇದೇ ಸಮಯದಲ್ಲಿ ವಿವಿಧ ವಿಭಾಗದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಯಿತು.

Share This
300x250 AD
300x250 AD
300x250 AD
Back to top