Slide
Slide
Slide
previous arrow
next arrow

ಬಂಗಾರಮಕ್ಕಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

300x250 AD

ಹೊನ್ನಾವರ : ಶ್ರೀ ಗಣೇಶ ಸವೇದ ಸಂಸ್ಕೃತ ಪಾಠಶಾಲೆಯ ಹಾಗೂ ಶ್ರೀಕ್ಷೇತ್ರ ಬಂಗಾರಮಕ್ಕಿಯ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಶ್ರೀಕ್ಷೇತ್ರದ ಧರ್ಮಾಧಿಕಾರಿಗಳಾದ ಶ್ರೀ ಮಾರುತಿ ಗುರೂಜಿಯವರು ಧ್ವಜಾರೋಹಣವನ್ನು ನೆರವೇರಿಸಿದರು. ಶ್ರೀ ಗಣೇಶ ಸವೇದ ಸಂಸ್ಕೃತ ಪಾಠಶಾಲೆಯ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶ್ರೀಕ್ಷೇತ್ರ ಬಂಗಾರಮಕ್ಕಿಯ ಸಿಬ್ಬಂದಿಗಳು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್ & ಪಿ. ಯು. ಕಾಲೇಜ್‌ ಬಂಗಾರಮಕ್ಕಿಯಲ್ಲಿ ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಾರುತಿ ಗುರೂಜಿಯವರು ಧ್ವಜಾರೋಹಣವನ್ನು ನೆರವೇರಿಸಿದರು. ಪುಟಾಣಿ ಮಕ್ಕಳು ಭಾಷಣ, ದೇಶಭಕ್ತಿಗೀತೆ, ನೃತ್ಯದ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಸಂಸ್ಥೆಯ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಶೈಕ್ಷಣಿಕ ನಿರ್ದೇಶಕರು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top