ಸಿದ್ದಾಪುರ: ಪಟ್ಟಣದ ನೆಹರೂ ಮೈದಾನದಲ್ಲಿ ಸಾರ್ವತ್ರಿಕ ಗಣರಾಜ್ಯೋತ್ಸವನ್ನು ಸಡಗರದಿಂದ ಆಚರಿಸಲಾಯಿತು. ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿ, ಭಾರತದ ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಈಡೇರಿಸಬೇಕು. ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಗೆ ಅರ್ಥ ಕಲ್ಪಿಸಬೇಕಿದೆ. ವಸತಿ ಯೋಜನೆ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಜತೆಗೆ ದೇಶದ ಜನತೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದೆ ಎಂದರು.
ಸನ್ಮಾನ: ಕ್ರೀಡೆ ಹಾಗೂ ವಿವಿಧ ಕ್ಷೇತ್ರದಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ತಾಲೂಕಿನ ಕೀರ್ತಿ ಬೆಳಗಿದ ವಿದ್ಯಾರ್ಥಿಗಳಾದ
ಧನ್ಯ ಚಂದ್ರಶೇಖರ ನಾಯ್ಕ, ಕೀರ್ತಿ ಗೌಡ, ಸಮರ್ಥ ನಾಯ್ಕ, ಸಪ್ನಾ ಗೌಡ, ಶಾಶ್ವತ ಹೆಗಡೆ, ಶರತ ಹೆಗಡೆ ಇವರನ್ನು ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ತಾಲೂಕಾ ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ಈ ವೇಳೆ ಪಟ್ಟಣ ಪಂಚಾಯತ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ ನಾಯ್ಕ, ಸದಸ್ಯರಾದ ರವಿಕುಮಾರ ನಾಯ್ಕ, ವೆಂಕೋಬ, ರಾಧಿಕಾ ಕಾನಗೋಡ, ವಿಜೇಂದ್ರ ಗೌಡರ್, ಮುಖ್ಯಾಧಿಕಾರಿ ಜೆ.ಆರ್.ನಾಯ್ಕ, ತಾಲೂಕಾ ಪಂಚಾಯ್ತಿ ಇಓ ದೇವರಾಜ ಹಿತ್ತಲಕೊಪ್ಪ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆಯ್.ನಾಯ್ಕ, ಸಿಪಿಐ ಕುಮಾರ ಕೆ ಉಪಸ್ಥಿತರಿದ್ದರು.