Slide
Slide
Slide
previous arrow
next arrow

ದಾಂಡೇಲಿಯಲ್ಲಿ ಅದ್ದೂರಿ ಗಣರಾಜ್ಯೋತ್ಸವ

300x250 AD

ದಾಂಡೇಲಿ : ನಗರದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಶುಕ್ರವಾರ ಆಚರಿಸಲಾಯಿತು. ತಾಲೂಕಾಡಳಿತ ಮತ್ತು ನಗರಾಡಳಿತದ ಆಶ್ರಯದಡಿ ಹಳೆ ನಗರಸಭೆ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಗರಸಭೆಯ ಪೌರಾಯುಕ್ತರಾದ ಆರ್ ಎಸ್ ಪವಾರ್ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ಮಾತನಾಡಿದ ಅವರು ಅನೇಕತೆಯಲ್ಲಿ ಏಕತೆಯೊಂದಿಗೆ, ಪರಸ್ಪರ ಒಗ್ಗಟ್ಟು ಸೌಹಾರ್ದತೆಯಿಂದ ಜೀವನ ನಡೆಸುವುದರ ಜೊತೆಗೆ ದೇಶಭಕ್ತಿಯನ್ನು ಮೈಗೂಡಿಸಿಕೊಂಡು ಅಂಬೇಡ್ಕರ್ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ್ ಪರಮಾನಂದ, ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಹಿದಾ ಪಠಾಣ್, ಡಿವೈಎಸ್ಪಿ ಶಿವಾನಂದ್ ಕಟಗಿ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎನ್ ವಾಸರೆಯರವರು ಉಪಸ್ಥಿತರಿದ್ದರು. ಶಿಕ್ಷಕ ಸೀತಾರಾಮ್ ನಾಯ್ಕ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ನಗರ ಸಭೆಯ ಅಧಿಕಾರಿಗಳಾದ ಮೈಕಲ್ ಫರ್ನಾಂಡೀಸ್, ಬಾಳು ಗವಸ ಸಹಕರಿಸಿದರು. ಕಾರ್ಯಕ್ರಮದಲ್ಲಿ ನಗರ ಸಭೆಯ ಸದಸ್ಯರು, ಶಾಲಾ /ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top