Slide
Slide
Slide
previous arrow
next arrow

ಇಂದು ಅಂಬೇವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುವರ್ಣ ಮಹೋತ್ಸವದ ಸಂಭ್ರಮ

300x250 AD

ದಾಂಡೇಲಿ: ಅಂಬೇವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಜನವರಿ 27ರ ಶನಿವಾರ ಬೆಳಗ್ಗೆ 9.30 ಕ್ಕೆ ಶಾಲಾ ಆವರಣದಲ್ಲಿ ನಡೆಯಲಿದೆ.

ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಶಿ ಶೈಕ್ಷಣಿಕ ಜಿಲ್ಲೆ, ಬಂಗೂರನಗರ ಕ್ಲಸ್ಟರ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಗಳ ಸಂಘ‌ ಮತ್ತು ಸುವರ್ಣ ಮಹೋತ್ಸವ ಸಮಿತಿಯ ಸಂಯುಕ್ತ ಆಶ್ರಯದಡಿ ಆಯೋಜಿಸಲಾದ ಶಾಲೆಯ 50 ನೇ ವಾರ್ಷಿಕೋತ್ಸವ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಆರ್. ವಿ.ದೇಶಪಾಂಡೆ ವಹಿಸಲಿದ್ದು, ಉದ್ಘಾಟಕರಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್. ವೈದ್ಯ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹಾಗೂ ಅತಿಥಿಗಳಾಗಿ ಸಂಸದ ಅನಂತಕುಮಾರ್ ಹೆಗಡೆ, ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರ ಶಾಂತಾರಾಮ ಸಿದ್ಧಿ ಮತ್ತು ಗಣಪತಿ ಉಳ್ವೇಕರ ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರಕುಮಾರ್ ಕಾಂದೂ, ಉಪವಿಭಾಗಾಧಿಕಾರಿ ಕನಿಷ್ಕ ಶರ್ಮಾ, ಶಿರಶಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕರಾದ ಪಾರಿ ಬಸವರಾಜ, ತಹಶೀಲ್ದಾರ್ ಶೈಲೇಶ ಪರಮಾನಂದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ ಹಾಲಮ್ಮನವರ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಕೆ. ಮಹಾಲೆ, ಪೌರಾಯುಕ್ತ ರಾಜಾರಾಮ ಪವಾರ, ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಜೈನ್, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ವಿ.ಎಸ್.ಬಾಪುಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

300x250 AD

ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು, ಶಿಕ್ಷಕರ ಸಂಘದ ಅಧ್ಯಕ್ಷರು, ಸದಸ್ಯರು, ಸಿ.ಆರ್ ಪಿ, ಬಿ.ಆರ್.ಸಿ, ಶಾಲಾಬಿವೃದ್ಧಿ‌ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದ ಯಶಸ್ವಿಗಾಗಿ ಶ್ರಮಿಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಶಾಲಾ ಸುವರ್ಣಮಹೋತ್ಸವ ಸಮಿತಿಯ ಗೌರವಾಧ್ಯಕ್ಷರು ಹಾಗೂ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷರಾದ ಸಂಜಯ ನಂದ್ಯಾಳಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top