Slide
Slide
Slide
previous arrow
next arrow

ಸಂವಿಧಾನದ ಮೂಲ ಆಶಯ ಸಮಾಜದೆಲ್ಲೆಡೆ ಸಾಕಾರಗೊಳ್ಳಬೇಕು: ಸಚಿವ ವೈದ್ಯ

300x250 AD

ಕಾರವಾರ: ದೇಶದ ಸಂವಿಧಾನದ ಮೂಲ ಆಶಯಗಳು ಸಮಾಜದ ಎಲ್ಲೆಡೆಯಲ್ಲಿ ಸಾಕಾರಗೊಳ್ಳಬೇಕು. ದೇಶದ ಎಲ್ಲಾ ಜನತೆ ಯಾವುದೇ ತಾರತಮ್ಯಗಳಿಲ್ಲದೆ ಸಮಾನತೆ ಮತ್ತು ಸೌಹಾರ್ದತೆಯಿಂದ ಬಾಳಬೇಕು. ಇದೇ ನಮ್ಮ ಸಂವಿಧಾನ ರಚನೆಯ ಪ್ರಮುಖ ಉದ್ದೇಶ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಇಲ್ಲಿನ ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿ, ಸಂವಿಧಾನವು ನಮ್ಮ ದೇಶದ ಮುಖ್ಯ ಗ್ರಂಥ.ಸಮಾಜದ ಎಲ್ಲಾ ವರ್ಗಗಳ ಜನತೆ ತಮ್ಮ ನಡುವೆ ಯಾವುದೇ ತಾರತಮ್ಯವಿಲ್ಲದೆ ಮುಕ್ತವಾಹಿನಿಯಲ್ಲಿ ಬೆರೆತು ಒಂದಾಗಿ, ಒಗ್ಗಟ್ಟಾಗಿ ನೆಮ್ಮದಿಯಿಂದ ಬಾಳುವುದೇ ಸಂವಿಧಾನದ ಪ್ರಮುಖ ಮತ್ತು ಮೂಲ ಆಶಯವಾಗಿದ್ದು, ಸಂವಿಧಾನದ ತತ್ವಗಳಿಗೆ ಪ್ರತಿಯೊಬ್ಬರು ಬದ್ಧವಾಗಿರಬೇಕು ಎಂದರು. ಸಂವಿಧಾನದ ಮಹತ್ವ ಮತ್ತು ಆಶಯಗಳ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾದ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಇಂದಿನಿಂದ ಆರಂಭಗೊಳ್ಳಲಿದೆ. ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಎಲ್ಲಾ ವರ್ಗದ ಸಮುದಾಯಗಳಿಗೆ ಸಮಾನವಾಗಿ ಯೋಜನೆಗಳನ್ನು ತಲುಪಿಸುವ ಮೂಲಕ ಜನತೆ ನೆಮ್ಮದಿಯಿಂದ ಬದುಕುವಂತೆ ಮಾಡಿದ್ದು, ಈ ಯೋಜನೆಗಳಿಗೆ ಪ್ರತಿ ವರ್ಷ 70000 ಕೋಟಿ ರೂ ಗೂ ಹೆಚ್ಚು ವೆಚ್ಚ ಮಾಡುತ್ತಿದ್ದು, ಉ.ಕನ್ನಡ ಜಿಲ್ಲೆಗೆ 1500 ಕೋಟಿ ರೂ ಮೊತ್ತದ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿವೆ ಎಂದರು.
ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 3.30 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದು,93.35 ಕೋಟಿ ರೂ ವೆಚ್ಚ ಮಾಡಿದೆ. ಅನ್ನಭಾಗ್ಯ ಯೋಜನೆಯಡಿ 95.21 ಕೋಟಿ ರೂ ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷೀ ಯೋಜನೆಯಡಿ 3.8 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ 110 ಕೋಟಿ ರೂ ಗೂ ಅಧಿಕ ಮೊತ್ತ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3.75 ಲಕ್ಷ ಕುಟುಂಬಗಳಿಗೆ 85.22 ಕೋಟಿ ರೂ ಮೊತ್ತದ ಉಚಿತ ವಿದ್ಯುತ್ ವಿತರಿಸಲಾಗಿದೆ. ಯುವನಿಧಿ ಯೋಜನೆಗೆ ಜಿಲ್ಲೆಯ ಎಲ್ಲಾ ಅರ್ಹ ನಿರುದ್ಯೋಗಿಗಳನ್ನು ನೋಂದಣಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟದ ಸೌಲಭ್ಯ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಪೂರಕವಾಗುವಂತಹ ಎಲ್ಲಾ ವ್ಯವಸ್ಥೆಗಳನ್ನು ಒದಗಿಸಲು ಸದಾ ಬದ್ದವಾಗಿದ್ದೇನೆ. ಶಾಲೆಗಳಿಗೆ ಹೊಸ ಶಿಕ್ಷಕರ ನೇಮಕ ಮತ್ತು ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದ್ದು, ಜಿಲ್ಲೆಯ ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದ0ತೆ ನೋಡಿಕೊಳ್ಳಲಾಗುವುದು. ಕಾರವಾರ ಬಂದರುನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಹೊಳೆತ್ತುವ ಕಾಮಗಾರಿ ಪ್ರಗತಿಯಲ್ಲಿದ್ದು, ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಮೂಲಕ ಮೀನುಗಾರರಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ. 1118 ಕೋಟಿ ರೂ ವೆಚ್ಚದಲ್ಲಿ ಕರಾವಳಿ ಭಾಗದ ಎಲ್ಲಾ ಬಂದರುಗಳ ವ್ಯಾಪ್ತಿಯಲ್ಲಿ ರಸ್ತೆಗಳು ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

300x250 AD

ಪೊಲೀಸ್, ಅರಣ್ಯ, ಗೃಹ ರಕ್ಷಕ ದಳ , ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ಸ್ ತಂಡಗಳಿಂದ ಆಕರ್ಷಕ ಪಥ ಸಂಚಲನ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಮಕ್ಕಳಿಗೆ ಸನ್ಮಾನ, ಕಾರ್ಮಿಕ ಇಲಾಖೆವತಿಯಿಂದ 10 ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ, ಕೃಷಿ ಇಲಾಖೆವತಿಯಿಂದ ಕೃಷಿ ಪಂಡಿತ ಪ್ರಶಸ್ತಿ ವಿತರಣೆ, ಆರೋಗ್ಯ ಇಲಾಖೆವತಿಯಿಂದ ಕಾರ್ಯ ಕ್ಷಮತೆಯ ಆಧಾರದ ಮೇಲೆ 5 ಆರೋಗ್ಯ ಸಂಸ್ಥೆಗಳಿಗೆ ಪ್ರಮಾಣಪತ್ರ ವಿತರಣೆ,ಪ.ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಸಾಂಕೇತಿಕವಾಗಿ ಪೌಷ್ಠಿಕ ಆಹಾರ ಯೋಜನೆ ಕಿಟ್ ವಿತರಣೆ, ಸರ್ಕಾರದ ಗ್ಯಾರಂಠಿ ಯೋಜನೆಗಳಲ್ಲಿ ಅತೀ ಉತ್ತಮ ನಾಗರಿಕ ಸೇವೆ ನೀಡಿದ 3 ಗ್ರಾಮ ಒನ್ ನಿರ್ವಾಹಕರಿಗೆ , ರಾಷ್ಟ್ರ ಮಟ್ಟದ ರೋಲರ್ ಸ್ಕೇಟಿಂಗ್ ಹಾಕಿ ಸ್ಪರ್ದೇಯಲ್ಲಿ ಬಹುಮಾನ ಪಡೆದ ಮಕ್ಕಳಿಗೆ ಸನ್ಮಾನ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ ಮತ್ತಿತರರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top