ಶಿರಸಿ: ಇಲ್ಲಿನ ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಾಚಾರ್ಯ ಡಾ. ಟಿ ಎಸ್ ಹಳೆಮನೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದು. ಒಂದು ದೇಶ ಸದೃಢವಾಗಿ ಬೆಳೆದು ಅಭಿವೃದ್ಧಿ ಹೊಂದಲು ರಾಗ ದ್ವೇಷಗಳನ್ನು ಮರೆತು ಪ್ರತಿಯೊಬ್ಬ ಪ್ರಜೆಯೂ ಶ್ರಮಿಸಬೇಕು. ಹಾಗಾದಲ್ಲಿ ಭಾರತ ವಿಶ್ವ ಗುರುವಾಗಲು ಸಾಧ್ಯ. ಯುವಕರು ದೇಶದ ಶಕ್ತಿ. ವಿದ್ಯಾರ್ಥಿಗಳು ಶಿಸ್ತು ಸಂಯಮದೊಂದಿಗೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ದೇಶದ ಹಿತ ಕಾಯುವಲ್ಲಿ, ಬೆಳವಣಿಗೆಯಲ್ಲಿ ಪ್ರಧಾನ ಭೂಮಿಕೆಯನ್ನು ವಹಿಸಬೇಕು. ಅಸ್ಸಾಂ ಪಂಜಾಬ್ ಕಾಶ್ಮೀರದಲ್ಲಿ ಹಿಂದೆ ಅಶಾಂತಿ, ಕ್ಷೋಭೆಗಳಿದ್ದವು. ಇಂದು ಸದೃಢ ಆಡಳಿತ, ದೃಢ ನಿರ್ಧಾರ, ಅಭಿವೃದ್ಧಿಗಳಿಂದ ಶಾಂತಿ ನೆಲೆಸುವಂತಾಗಿದೆ ಎಂದರು. ಈ ಸಂದರ್ಭದಲ್ಲಿ ನರ್ಸಿಂಗ್ ಕಾಲೇಜು ಪ್ರಾಚಾರ್ಯೆ ಬೇಬಿ ನಾಯ್ಕ,ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.