Slide
Slide
Slide
previous arrow
next arrow

ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

300x250 AD

ಶಿರಸಿ: ಇಲ್ಲಿನ ನರೆಬೈಲ್ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಆಡಳಿತಾಧಿಕಾರಿ ಶ್ರೀಮತಿ ವಿದ್ಯಾ ನಾಯ್ಕ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.. ಧ್ವಜಾರೋಹಣದ ನಂತರ ಸೇವಾದಳ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಡೆಂಬೆಲ್ಸ್ ಹಾಗೂ ಲೇಜಿಮ್ ಪ್ರದರ್ಶನ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಸೈನಿಕ ಸುಬೇದಾರ್ ರಾಮು ನಮ್ಮ ದೇಶದ ಸೈನ್ಯ ವ್ಯವಸ್ಥೆ, ದೇಶದ ವಿಭಜನಾ ವಿಷಯ ಮತ್ತು ಸಿಯಾಚಿನ್ ಗಡಿ ಭಾಗದ ವಿಷಯಗಳನ್ನು ಪವರ್ ಪಾಯಿಂಟ್ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯದರ್ಶಿ ಎಲ್ ಎಂ ಹೆಗಡೆ ಗಣರಾಜ್ಯೋತ್ಸವದ ಶುಭಾಶಯ ಕೋರಿ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಂತರ ಸುಬೇದಾರದ ರಾಮುರವರನ್ನು ಕಾರ್ಯದರ್ಶಿ ಎಲ್ ಎಂ ಹೆಗಡೆ ಹಾಗೂ ಆಡಳಿತಾಧಿಕಾರಿ ವಿದ್ಯಾ ನಾಯ್ಕರವರು ಸನ್ಮಾನಿಸಿದರು.ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು , ಮುಖ್ಯೋಪಾಧ್ಯಾಯರು, ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಹಾಗೆಯೆ ಚಂದನ ಆಂಗ್ಲ ಮಾಧ್ಯಮ ಶಾಲೆಯ ಭಗತಸಿಂಗ್ ಸೇವಾದಳ ಶಾಖೆಯ ವಿದ್ಯಾರ್ಥಿಗಳು ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣದಲ್ಲಿ ಭಾಗವಹಿಸಿ ಪಥಸಂಚಲನದಲ್ಲಿ ಭಾಗಿಯಾದರು

300x250 AD
Share This
300x250 AD
300x250 AD
300x250 AD
Back to top