Slide
Slide
Slide
previous arrow
next arrow

ಮಕ್ಕಳಲ್ಲಿ ದೇಶಾಭಿಮಾನ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ: ಸುರೇಶ್ಚಂದ್ರ ಕೆಶಿನ್ಮನೆ

300x250 AD

ಶಿರಸಿ: ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ಧಾರವಾಡದ ಶಿರಸಿಯ ಹನುಮಂತಿಯಲ್ಲಿನ ಶೀಥಲ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವದ ನಿಮಿತ್ತ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ವರ್ಷದ ನಮ್ಮ ಗಣರಾಜ್ಯೋತ್ಸವ ಅತ್ಯಂತ ವಿಶೇಷವಾಗಿದ್ದು, ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೊಸ್ಕರ ಈ ದಿನಾಚರಣೆಯನ್ನು ನಾವು ಆಚರಿಸುತ್ತಿದ್ದು, ಈ ಘಳಿಗೆಯ ಮಹತ್ವವನ್ನು ಪ್ರತೀಯೊಬ್ಬ ನಾಗರೀಕನು ಅರಿತು ಅರ್ಥಪೂಣವಾಗಿ ಬದುಕಬೇಕಿದೆ ಎಂದರು. ಈಗಿನ ಪೀಳಿಗೆಯ ಮಕ್ಕಳಲ್ಲಿ ದೇಶದ ಕುರಿತು ಅಭಿಮಾನ ಹಾಗೂ ದೇಶಭಕ್ತಿಯ ಭಾವನೆಯನ್ನು ನಾವು ಈಗಿನಿಂದಲೇ ಅವರಿಗೆ ಅರಿವು ಮೂಡಿಸಿ ನಾವೇಲ್ಲರೂ ಭಾರತೀಯರು ಎಂಬ ಭಾವನೆ ಮೂಡುವಂತೆ ನೋಡಿಕೊಳ್ಳಬೇಕಾಗಿದೆ ಹಾಗೂ ನಮ್ಮ ದೇಶಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಆ ಇತಿಹಾಸ ಇತರ ದೇಶಗಳ ಇತಿಹಾಸಕ್ಕಿಂತ ಮಾದರಿಯಾಗಿದೆ ಅದರಂತೆಯೇ ನಾವುಗಳೂ ಸಹ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಬೇಕಿದೆ ಎಂದರು. ಮುಂಬರುವ ದಿನಗಳಲ್ಲಿ ಎಲ್ಲರೂ ಒಟ್ಟುಗೂಡಿ ನಮ್ಮ ಈ ಸಂಸ್ಥೆಯನ್ನು ನಮ್ಮ ಮನೆಯಂತೆಯೇ ಭಾವಿಸಿ ನಾವು ಕೆಲಸ ಮಾಡಿದರೆ ಮಾತ್ರ ಸಂಸ್ಥೆಯ ಏಳಿಗೆಯನ್ನು ನಾವು ಕಾಣುವುದರ ಜೊತೆಗೆ ನಾವೆಲ್ಲರೂ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿ ಉತ್ತಮ ಗುಣಮಟ್ಟದ ಹಾಲನ್ನು ಅಧಿಕ ರೂಪದಲ್ಲಿ ಸಂಗ್ರಹಣೆ ಮಾಡುವ ಮೂಲಕ ಜಿಲ್ಲೆಯ ಹಾಲು ಉತ್ಪಾದಕ ರೈತರ ಏಳಿಗೆಗೆ ಶ್ರಮಿಸಬೇಕಾಗಿದ್ದು, ಹಾಲು ಉತ್ಪಾದಕ ರೈತಪರ ಕೆಲಸಗಳನ್ನು ಇನ್ನಷ್ಟು ಉತ್ತಮ ರೀತಿಯಲ್ಲಿ ಮಾಡಿ ಜನರಲ್ಲಿ ಹೈನುಗಾರಿಕೆಯ ಬಗ್ಗೆ ಹೆಚ್ಚಿನ ಆಸಕ್ತಿ ಮೂಡುವಂತೆ ಮಾಡಬೇಕಿದೆ ಎಂದರು.

300x250 AD

ಈ ಸಂದರ್ಭದಲ್ಲಿ ಧಾರವಾಡ ಸಹಕಾರ ಹಾಲು ಒಕ್ಕೂಟದ ನಿರ್ದೇಶಕರಾದ ಪರಶುರಾಮ ವೀರಭದ್ರ ನಾಯ್ಕ, ಶೀಥಲ ಕೇಂದ್ರದ ವ್ಯವಸ್ಥಾಪಕರಾದ ಕೃಷ್ಣ ಕೆಎನ್, ದೇವೆಂದ್ರ ಕುಮಾರ ಹಾಗೂ ಧಾರವಾಡ ಸಹಕಾರ ಹಾಲು ಒಕ್ಕೂಟದ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top