ಕಾರವಾರ: ಸಂವಿಧಾನದ ಮಹತ್ವ ಮತ್ತು ಆಶಯಗಳ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಸಂವಿಧಾನ ಜಾಗೃತಿ ಜಾಥಾಗೆ ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಚಾಲನೆ ನೀಡಿ, ಜಿಲ್ಲೆಯ ಎಲ್ಲಾ 229 ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸುವ ಈ ಜಾಗೃತಿ ಜಾಥಾದ ಮೂಲಕ ಸಾರ್ವಜನಿಕರಿಗೆ ಸಂವಿಧಾನ ಮಹತ್ವ ಕುರಿತು ಅರಿವು ಮೂಡಿಸಿ, ಸಂವಿಧಾನ ಪೀಠಿಕೆಯ ಪ್ರತಿಗಳನ್ನು ವಿತರಿಸುವ ಜೊತೆಗೆ, ಗ್ರಾಮ ಪಂಚಾಯತ್ನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದೆ ಎಂದರು.
ವಿವಿಧ ಸಾಂಸ್ಕೃತಿಕ ಕಲಾತಂಡಗಳು ಜಾಥಾದ ಮೆರಗು ಹೆಚ್ಚಿಸಿದ್ದವು, ಜಾಥಾದಲ್ಲಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಸುಗ್ಗಿ ಕುಣಿತದ ಕಿರೀಟ ತೊಟ್ಟು , ನೃತ್ಯಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ13 ಪಶು ಸಂಜಿವಿನಿ ವಾಹನಗಳಿಗೆ ಉಸ್ತುವಾರಿ ಸಚಿವರು ಚಾಲನೆ ನೀಡಿದರು.