Slide
Slide
Slide
previous arrow
next arrow

ದಾಂಡೇಲಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರಿಗೆ ಬೆಂಕಿ: ತಪ್ಪಿದ ಅನಾಹುತ

300x250 AD

ದಾಂಡೇಲಿ: ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಜೆ.ಎನ್.ರಸ್ತೆಯಲ್ಲಿರುವ ಶ್ರೀಹರಿ ಚಿತ್ರಮಂದಿರ ಹತ್ತಿರದಲ್ಲಿ ಶನಿವಾರ ನಡೆದಿದೆ.

ಹಳೆದಾಂಡೇಲಿ‌ಯ ನಿವಾಸಿಯಾದ ಮಾನಸಿಂಗ್ ರಾಠೋಡ್ ರಸ್ತೆ ಬದಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ಸ್ಕೂಟರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಸಾರ್ವಜನಿಕರು ನೀರನ್ನು ಹಾಕಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೆ ಅಹಿತಕರ ಘಟನೆ ನಡೆದಿಲ್ಲ. ಕೇವಲ 7 ತಿಂಗಳ ಹಿಂದೆಯಷ್ಟೆ ಖರೀದಿ ಮಾಡಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿಯಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಬ್ಯಾಟರಿ ಬಿಸಿಯಾಗಿ ಅಥವಾ ಶಾರ್ಟ್ ಸರ್ಕ್ಯೂಟಿನಿಂದಾಗಿ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top