ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಕೃತಿಕಾ ರತನ ಗಾಂವಕರ ಹಾಗೂ ಕುಮಾರ ರಚನ ಸುರೇಂದ್ರ ನಾಯ್ಕ ಇವರು ‘ಇನಿಶಿಯೆಟಿವ್ ಫೊರ್ ಇನ್ನೊವೇಶನ್ ಇನ್ ಸ್ಟೆಮ್’ (IRIS) ಸಂಸ್ಥೆಯವರು ಸಂಘಟಿಸಿದ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ 2024 ಇದರಲ್ಲಿ ಭಾಗವಹಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮುಖ್ಯಾಧ್ಯಾಪಕರು, ಶಿಕ್ಷಕವೃಂದ, ಆಡಳಿತ ಮಂಡಳಿ ಹಾಗೂ ಶೈಕ್ಷಣಿಕ ಸಲಹೆಗಾರರು ಅಭಿನಂದಿಸಿ ಶುಭಕೋರಿದ್ದಾರೆ.