Slide
Slide
Slide
previous arrow
next arrow

ಗೋಳಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ: ಮನರಂಜನಾ ಕಾರ್ಯಕ್ರಮ

300x250 AD

ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನುಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಸಿದ್ಧಿವಿನಾಯಕ ವಿದ್ಯಾಪ್ರಸಾರ ಸಮಿತಿ ಗೋಳಿ ಇದರ ಅಧ್ಯಕ್ಷರಾದ ಎಂ.ಎಲ್. ಹೆಗಡೆ ಹಲಸಿಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳ ಸಾಧನೆಗಳು ಮುಂದಿನ ಮಕ್ಕಳಿಗೆ ಪ್ರೇರಣೆ ಆಗಬೇಕು ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮರೆಯಬಾರದು ಎಂದು ಅಭಿಪ್ರಾಯಪಟ್ಟರು. ಈ ಸಮಯದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶಿವಾನಂದ ಹೆಗಡೆ ಉಗ್ರೇಸರ, ಸದಸ್ಯರಾದ ವಿ.ಎಮ್. ಹೆಗಡೆ ಹಾರೂಗಾರ್, ಸಿ.ಎಸ್. ಹೆಗಡೆ ನೇರಲಹದ್ದ, ಗಜಾನನ ಹೆಗಡೆ ದೊಡ್ಮನೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಮಕ್ಕಳ “ಕುಸುಮ” ಹಸ್ತಪತ್ರಿಕೆ ಬಿಡುಗಡೆಗೊಳಿಸಲಾಯಿತು. ಶಾಲೆಯ ಮುಖ್ಯಾಧ್ಯಾಪಕರಾದ ನಾರಾಯಣ ದೈಮನೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಗಣೇಶ ಜಿ ಹೆಗಡೆ ಬಹುಮಾನ ವಿತರಣೆ ಕಾರ್ಯಕ್ರಮ ನಿರ್ವಹಿಸಿದರು. ರೂಪೇಶ್‌ ಚವ್ಹಾಣ ವಂದಿಸಿದರು. ಪಿ. ಮಂಜಪ್ಪ ಕಾರ್ಯಕ್ರಮ ನಿರೂಪಿಸಿದರು. ನಂತರ ಕುಮಾರಿ ಸುಚೇತಾ ಹೆಗಡೆ ಇವಳ ನಿರೂಪಣೆಯಲ್ಲಿ ಮಕ್ಕಳಿಂದ ಕಿರು ಮನರಂಜನಾ ಕಾರ್ಯಕ್ರಮ ನಡೆಯಿತು.

300x250 AD
Share This
300x250 AD
300x250 AD
300x250 AD
Back to top