ಕಾರವಾರ: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ. ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯು ವಾರ್ಡ್ ಪಕ್ಕದಲ್ಲೇ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಫ್ಯೂಸ್ ಇದ್ದ ವಿದ್ಯುತ್ ಬಾಕ್ಸ್ ಸುಟ್ಟು ಕರಕಲಾಗಿದೆ. ಆಸ್ಪತ್ರೆಗೆ ಬಂದಿದ್ದವರು ಆತಂಕಗೊಳ್ಳುವಂತಾಯಿತು. ಅದೃಷ್ಠವಶಾತ್ ಯಾವುದೇ ತೊಂದರೆಯಾಗಿಲ್ಲ