Slide
Slide
Slide
previous arrow
next arrow

ಕುಂಬಾರವಾಡಾದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ದೂರಿ ಸ್ವಾಗತ

300x250 AD

ಜೊಯಿಡಾ: ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ರಥವನ್ನು ತಾಲೂಕಿನ ಕುಂಬಾರವಾಡದಲ್ಲಿ ಭಾನುವಾರ ಭವ್ಯವಾದ ಸ್ವಾಗತ‌ದೊಂದಿಗೆ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಧಿಕಾರಿ ಬಾಸಂತಿ ಗೌಡ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲರು ಸಂವಿಧಾನ ಆಶಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾತೇಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಚೆನ್ನಮ್ಮ ಡೊಂಬರ ಸ್ವಾಗತಿಸಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾ.ಪಂ ಅಧಿಕಾರಿ ಎ.ಡಿ. ಅಕ್ಕಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಕಲ್ಪನಾ ಕಾಂಬ್ಳೆ, ಶಂಕರ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು. ಪಿ.ಡಿ.ಓ ಬೇವಿನ ಕೊಪ್ಪ ಸ್ವಾಗತಿಸಿ, ವಂದಿಸಿದರು.

300x250 AD

ಅಣಶಿ, ಉಳವಿ, ಗುಂದ, ಕುಂಬಾರವಾಡಾ, ಗಾಂಗೋಡಾ, ನಾಗೋಡಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಥ ಸಂಚರಿಸಿತು.

Share This
300x250 AD
300x250 AD
300x250 AD
Back to top