ಶಿರಸಿ: ತಾಲೂಕಿನ ಸುಬ್ರಹ್ಮಣ್ಯ ಮಂಜುನಾಥ್ ಆಚಾರಿ ಸಾದರ ಪಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.
ಸುಬ್ರಹ್ಮಣ್ಯ ಆಚಾರ್ಯ ದಾವಣಗೆರೆಯ ಎ. ಆರ್. ಎಮ್. ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಕೇಶ್ ಬಿ. ಸಿ. ಮಾರ್ಗದರ್ಶನದಲ್ಲಿ ಆಳವಾದ ಸಂಶೋಧನೆಯನ್ನು ನಡೆಸಿ ‘ಹೊನ್ನಾವರ ತಾಲೂಕಿನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ’ ಎಂಬ ಶೀರ್ಷಿಕೆಯ ಮಹಾ ಪ್ರಬಂಧವನ್ನು ಕನ್ನಡ ವಿಶ್ವವಿದ್ಯಾಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗಕ್ಕೆ ಸಲ್ಲಿಸಿದ್ದರು. ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಿ ಮಾತನಾಡಿದ ಸುಬ್ರಹ್ಮಣ್ಯ ಆಚಾರ್ಯ ವಿಶ್ವವಿದ್ಯಾಲಯದ ಕುಲಪತಿಗಳಿಗೂ ಅಧ್ಯಯನ ವಿಭಾಗದ ಮುಖ್ಯಸ್ಥರಿಗೂ ತಮ್ಮ ಮಾರ್ಗದರ್ಶಕರಿಗೂ ಹಾಗೂ ಪಿಎಚ್.ಡಿ ಅಧ್ಯಯನದ ಸಂದರ್ಭದಲ್ಲಿ ತಮಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.