• Slide
    Slide
    Slide
    previous arrow
    next arrow
  • ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವ್ಯವಸ್ಥೆ; ಕುಮಟಾದಲ್ಲಿ ಪಾಲಕರ ಆಕ್ರೋಶ

    300x250 AD

    ಕುಮಟಾ: ಪಟ್ಟಣದ ಪುರಭವನದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಹಮ್ಮಿಕೊಳ್ಳಲಾದ ವಿಶೇಷ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಮಕ್ಕಳ ಪಾಲಕರ ಆಕ್ರೋಶಕ್ಕೆ ಕಾರಣವಾಯಿತು

    ಕಾರವಾರದ ವೈದ್ಯಕೀಯ ಕಾಲೇಜ್ ಮತ್ತು ಜಿಲ್ಲಾ ಆಸ್ಪತ್ರೆಯ ಸಹಕಾರದಲ್ಲಿ ಕುಮಟಾ ಪಟ್ಟಣದ ಪುರಭವನದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. 0ದಿಂದ 18 ವರ್ಷದೊಳಗಿನ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಆಯೋಜಿಸಲಾದ ಈ ಶಿಬಿರದಲ್ಲಿ ಯಾವುದೇ ಸೂಕ್ತ ವ್ಯವಸ್ಥೆ ಇರಲಿಲ್ಲ. ಇದರಿಂದ ಆಕ್ರೋಶಗೊಂಡ ಮಕ್ಕಳ ಪಾಲಕರು ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಸೂರಜ ನಾಯ್ಕ ಅವರು ವ್ಯವಸ್ಥೆ ಪರಿಶೀಲಿಸಿ, ಶಿಬಿರದಲ್ಲಿ ಸ್ವಚ್ಛತೆ ಇಲ್ಲದೇ ಇರುವುದಕ್ಕೆ ಮತ್ತು ವೈದ್ಯರ ತಂಡದಲ್ಲಿ ತಜ್ಞ ವೈದ್ಯರು ಬಾರದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದರು.

    300x250 AD

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸೂರಜ ನಾಯ್ಕ ಸೋನಿ ಅವರು, ಇದೊಂದು ಸರ್ಕಾರಿ ಕಾರ್ಯಕ್ರಮ. ಅದರಲ್ಲೂ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಸಂಘಟಿಸಿ, ಅವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಈ ಶಿಬಿರ ಸಂಘಟಿಸುವಾಗ ಅಗತ್ಯ ಸೌಲಭ್ಯಗಳನ್ನು ಶಿಬಿರದಲ್ಲಿ ಕಲ್ಪಿಸಬೇಕಾಗುತ್ತದೆ, ಮುಖ್ಯವಾಗಿ ತಜ್ಞ ವೈದ್ಯರು ಈ ಶಿಬಿರದಲ್ಲಿದ್ದು, ತಪಾಸಣೆ ಮಾಡಬೇಕು. ಆದರೆ ಇಲ್ಲಿನ ವ್ಯವಸ್ಥೆ ಸರಿಯಾಗಿಲ್ಲ. ಶಿಬಿರದಲ್ಲಿ ಅಸ್ವಚ್ಛತೆ ತಾಂಡವಾಡುತ್ತಿದೆ. ಅಲ್ಲದೇ ಈ ಶಿಬಿರದ ಬಗ್ಗೆ ಮಾಹಿತಿಯ ಕೊರತೆ ಇದೆ. ಹಾಗಾಗಿ ತಪಾಸಣೆ ಮಾಡಿಸಿಕೊಳ್ಳಲು ಬರುವ ಮಕ್ಕಳ ಸಂಖ್ಯೆಯೂ ಕಡಿಮೆ ಇದೆ. ಈ ರೀತಿಯ ಶಿಬಿರ ಮಾಡಿ ಪ್ರಯೋಜನವಿಲ್ಲ. ಗ್ರಾಮೀಣ ಭಾಗದಿಂದ ಬರುವ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ದೊರೆಯದಿದ್ದರೆ ಮಕ್ಕಳಿಗೆ ಅನಾನುಕೂಲವಾಗುತ್ತದೆ. ಹಾಗಾಗಿ ಈ ಶಿಬಿರವನ್ನು ಸೂಕ್ತ ವ್ಯವಸ್ಥೆಯೊಂದಿಗೆ ಪುನಃ ಸಂಘಟಿಸಬೇಕೆಂದು ಒತ್ತಾಯಿಸಿದರು.

    Share This
    300x250 AD
    300x250 AD
    300x250 AD
    Leaderboard Ad
    Back to top