Slide
Slide
Slide
previous arrow
next arrow

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಫೆಬ್ರವರಿ ತಿಂಗಳಿನ ಅಂತ್ಯದಲ್ಲಿ ನಡೆಯುವ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕಾ ಹಾಗೂ ಮಾರ್ಚ ತಿಂಗಳಿನಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೆಜ್‌ಮೆಂಟ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಫೆ.15 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

300x250 AD

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9980510717, 9483485489ನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top