Slide
Slide
Slide
previous arrow
next arrow

‘ಪ್ರಾಚ್ಯ ಪ್ರಜ್ಞೆ’ ರಸಪ್ರಶ್ನೆ ಸ್ಪರ್ಧೆ: ಹೆಗ್ಗರಣಿ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

300x250 AD

ಸಿದ್ದಾಪುರ: ತಾಲೂಕಿನ ಹೆಗ್ಗರಣಿಯ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ವಿದ್ಯಾರ್ಥಿಗಳು ಜ.31ಕ್ಕೆ ಶಿರಸಿಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಪ್ರಾಚ್ಯ ಪ್ರಜ್ಞೆ’ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

9ನೇ ತರಗತಿಯ ವಿದ್ಯಾರ್ಥಿ ಶಮಂತ ಹೆಗಡೆ ಹಾಗೂ 8ನೇ ತರಗತಿಯ ವಿದ್ಯಾರ್ಥಿ ರಜತ ಹೆಗಡೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಿಗೆ ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಜಯಲಕ್ಷ್ಮಿ ಹೆಗಡೆ ಮಾರ್ಗದರ್ಶನ ನೀಡಿದ್ದು, ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿ, ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top