Slide
Slide
Slide
previous arrow
next arrow

ಬೈಕ್ ಸ್ಕಿಡ್ : ಸವಾರನಿಗೆ ಗಾಯ

300x250 AD

ದಾಂಡೇಲಿ : ನಗರದ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು ಸವಾರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.

ನಗರದ ಸುಭಾಷ್ ನಗರದ ನಿವಾಸಿ ಶುಭಂ ಕೋಲೆಕರ್ ಎಂಬಾತನೇ ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ.‌ ಗಾಯಗೊಂಡ ಈತನನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top