ಸಿದ್ದಾಪುರ: ತಾಲೂಕಿನ ಮಳಲವಳ್ಳಿಯ ಈಶ್ವರ ದೇವಸ್ಥಾನದ 2ನೇ ವರ್ಷದ ವಾರ್ಷಿಕೋತ್ಸವ, ಧರ್ಮಸಭೆ ಹಾಗೂ ಅಭಿನಂದನಾ ಸಮಾರಂಭ ಫೆ. 4 ರಂದು ವಿಜೃಂಭಣೆಯಿಂದ ಜರುಗಲಿದೆ.
ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದೇವಸ್ಥಾನದ ಅಧ್ಯಕ್ಷ ವೀರಭದ್ರ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ತಾಳಗುಪ್ಪ ಕದಂಬ ದೇವಸ್ಥಾನದ ಶ್ರೀ ಪಂಚಾಕ್ಷರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಜಿ.ನಾಗರಾಜ, ನ್ಯಾಯವಾದಿ ಜಿ.ಟಿ.ನಾಯ್ಕ, ಹಿರಿಯರಾದ ಕೆ.ಜಿ.ನಾಯ್ಕ ಹಸುವಂತೆ, ಕೋಲಶಿರ್ಸಿ ಸರ್ಕಾರಿ ಪಿಯು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಜೇಶ ನಾಯ್ಕ, ವಲಯ ಅರಣ್ಯ ಸಮಿತಿ ಅಧ್ಯಕ್ಷ ಸ್ವಾಮಿ ನಾಯ್ಕ, ಗ್ರಾಮ ಸುಧಾರಣಾ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಮನಮನೆ ಗ್ರಾಪಂ ಅಧ್ಯಕ್ಷ ನಾಗರಾಜ ನಾಯ್ಕ, ಸದಸ್ಯ ರಮೇಶ ಗೊಂಡ, ಮನಮನೆ ಸೊಸೈಟಿ ಅಧ್ಯಕ್ಷ ಶಾಂತಾರಾಮ ನಾಯ್ಕ, ಬಿಜೆಪಿ ಮುಖಂಡ ಕೃಷ್ಣಪ್ಪ ನಾಯ್ಕ, ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ ನಾಯ್ಕ, ಉಪಾಧ್ಯಕ್ಷ ರಾಮಕೃಷ್ಣ ನಾಯ್ಕ, ದೇವಸ್ಥಾನ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಗೋಪಾಲ ನಾಯ್ಕ, ಮೋಕ್ತೇಸರ್ ವಿಜಯ ಗೌಡರ್, ರವೀಂದ್ರ ಭಟ್ ಐಗಳಕೊಪ್ಪ, ಗ್ರಾಮ ಸುಧಾರಣಾ ಸಮಿತಿ ಕಾರ್ಯದರ್ಶಿ ರಮೇಶ ನಾಯ್ಕ, ಸದಸ್ಯ ತಿರುಪತಿ ನಾಯ್ಕ, ದೇವಸ್ಥಾನ ಸಮಿತಿ ಉಪಾಧ್ಯಕ್ಷ ಲಕ್ಷ್ಮಣ ನಾಯ್ಕ, ಧರ್ಮಪ್ಪ ಕಾನ್ಮನೆ, ಹಿರಿಯರಾದ ವೆಂಕಟೇಶ ನಾಯ್ಕ ಹಾಗೂ ಮುಖ್ಯ ಶಿಕ್ಷಕ ಎಂ.ಡಿ.ನಾಯ್ಕ ಪಾಲ್ಗೊಳ್ಳಲಿದ್ದಾರೆ. ಅದೇ ದಿನ ಸಂಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾತ್ರಿ ಸ್ಥಳೀಯ ಕಲಾವಿದರಿಂದ ‘ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ್’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.