Slide
Slide
Slide
previous arrow
next arrow

ಶಾಂತಾರಾಮ ಹೆಗಡೆ ನಿಧನ: ಎಂಇಎಸ್‌ನಲ್ಲಿ ಮೌನಾಚರಣೆ

300x250 AD

ಶಿರಸಿ: ನಗರದ ಎಂ.ಇ.ಎಸ್ ಎಂ.ಎಂ. ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ, ಅಗಲಿದ ಎಂ.ಇ.ಎಸ್ ಮಾಜಿ ಅಧ್ಯಕ್ಷ ಹಾಗೂ ಟಿಎಸ್ಎಸ್  ಮಾಜಿ ಅಧ್ಯಕ್ಷ ಶಾಂತರಾಮ್ ಹೆಗಡೆ ಶೀಗೆಹಳ್ಳಿ  ಸ್ಮರಣಾರ್ಥ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿ ಒಂದು ನಿಮಿಷ ಮೌನಾಚರಣೆಯನ್ನು ಮಾಡಲಾಯಿತು.

ಅಗಲಿದ ಚೇತನಕ್ಕೆ  ಶಾಂತಿ ಸಿಗಲೆಂದು, ಕುಟುಂಬದ ಎಲ್ಲಾ ಸದಸ್ಯರಿಗೂ ದುಃಖ ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ ಎಸ್ ಹಳೆಮನೆ, ‘ಸಹಕಾರಿ ರತ್ನ ಶಾಂತಾರಾಮ್ ಹೆಗಡೆಯವರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಸಹಕಾರಿ ಕ್ಷೇತ್ರ ಅಷ್ಟೇ ಅಲ್ಲದೆ ಶೈಕ್ಷಣಿಕ ಕ್ಷೇತ್ರದಲ್ಲಿ ಎಂ.ಇ.ಎಸ್ ನ ಅಧ್ಯಕ್ಷರಾಗಿ ಉತ್ತಮ ಆಡಳಿತವನ್ನು ನೀಡಿದ್ದಾರೆ. ಅವರು ಬ್ಯಾಂಕಿಂಗ್, ಆರೋಗ್ಯ, ಶಿಕ್ಷಣ, ಸಹಕಾರ, ಜಿಲ್ಲೆಯ ಸಂಸ್ಕೃತಿ ಪರಂಪರೆ ಹೀಗೆ ಹಲವಾರು ರಂಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಎಲ್ಲರಿಗೂ ಆದರ್ಶರಾಗಿ ಉತ್ತಮ ತತ್ವಗಳನ್ನು ನೀಡಿ ನಮ್ಮನ್ನು ಅಗಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top