ದಾಂಡೇಲಿ : ನಗರದ ಪಾಟೀಲ್ ಆಸ್ಪತ್ರೆಯಲ್ಲಿ ಹುಬ್ಬಳ್ಳಿಯ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ಆಶ್ರಯದಡಿ ಫೆ:3ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಉಚಿತ ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಈ ಶಿಬಿರದಲ್ಲಿ ನೋವಾ ಐವಿಎಫ್ ಫರ್ಟಿಲಿಟಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಪವಿತ್ರಾ ಶ್ಯಾಮ್ ಸುಂದರ್ ಹಾಗೂ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ದಾಂಡೇಲಿ, ಹಳಿಯಾಳ ಮತ್ತು ಜೋಯಿಡಾ ತಾಲ್ಲೂಕು ಸೇರಿದಂತೆ ಸುತ್ತಮುತ್ತಲ ಸಾರ್ವಜನಿಕರು ಭಾಗವಹಿಸಿ ಶಿಬಿರದ ಲಾಭವನ್ನು ಪಡೆದುಕೊಳ್ಳುವಂತೆ ನಗರದ ಪಾಟೀಲ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಮೋಹನ್ ಪಾಟೀಲ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.