Slide
Slide
Slide
previous arrow
next arrow

ಬಾಳಿಗಾದಲ್ಲಿ ‘ಯುವ ಸಂವಾದ-ಭಾರತ @2047’ ಯಶಸ್ವಿ

300x250 AD

ಕುಮಟಾ: ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತ ಸರಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ರಾಷ್ಟ್ರೀಯ ಸೇವಾ ಯೋಜನಾಕೋಶ ಹಾಗೂ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ‘ಯುವ ಸಂವಾದ-ಭಾರತ @2047’ ಭಾರತದ ಪಂಚಪ್ರಾಣ ಯುವಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ವಿಜಯಾ.ಡಿ.ನಾಯ್ಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪ್ರೀತಿಯ ಭಾವನೆಯನ್ನು ಬೆಳೆಸಬೇಕು ಹಾಗೂ ಕುಟುಂಬದವರನ್ನು, ನೆರೆಹೊರೆಯವರನ್ನು ಪ್ರೀತಿಯಿಂದ ಕಾಣಬೇಕು ಎಂದು ಮಾತನಾಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಕುಮಟಾದ ಡಾ.ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಶಂಕರ ಭಟ್ಟರವರು ಬ್ರಿಟಿಷರು ಬರುವ ಪೂರ್ವದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಶ್ರೀಮಂತವಾಗಿತ್ತು. ಸ್ವಸ್ಥ ಸಮಾಜ ನಿರ್ಮಾಣ ಪ್ರಮುಖ ಧ್ಯೇಯವಾಗಬೇಕು ಎಂಬುದಾಗಿ ಹಲವಾರು ದೃಷ್ಟಾಂತಗಳೊಂದಿಗೆ ವಿವರಿಸಿದರು.

ಕಾರ್ಯಕ್ರಮದ ಮುಖ್ಯ ಅಭ್ಯಾಗತರಾದ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ಎಂ.ಬಿ ದಳಪತಿಯವರು ಸಂವಿಧಾನದ ಮೌಲ್ಯಗಳನ್ನು, ವಿಚಾರಗಳನ್ನು ಗೌರವಿಸೋಣ. ಭಾರತವು ಯುವಜನರಿಂದ ಕೂಡಿದ ದೇಶ ಹಾಗಾಗಿ ಶ್ರಮಿಸಿ, ದುಡಿದು 2047 ಕ್ಕೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟçವಾಗಿ ಪರಿವರ್ತಿಸೋಣ ಎಂದರು. ಕಾರ್ಯಕ್ರಮದ ಅಧ್ಯಕ್ಷರಾದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆಯಾದ ಡಾ.ಶ್ರೀಮತಿ ಪ್ರೀತಿ. ಪಿ ಭಂಡಾರಕರ್, ತತ್ವ, ಆದರ್ಶ ಹೊಂದಿದ ವ್ಯಕ್ತಿಗಳಾಗಿ ಭಾರತದ ಪ್ರಜೆಗಳು ನಿರ್ಮಾಣವಾಗಬೇಕು. ಶ್ರಮಸಂಸ್ಕೃತಿ ಪ್ರಜೆಗಳಲ್ಲಿ ಹೆಚ್ಚಬೇಕು ಎಂದು ಹೇಳಿದರು. ಯುವ ಸಂವಾದ @2047 ರಲ್ಲಿ ವಿದಾರ್ಥಿಗಳ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಉತ್ತರಿಸಿದರು.

300x250 AD

ಕಾರ್ಯಕ್ರಮವು ಭಾರತೀಯ ಸಂಸ್ಕೃತಿಯ ವೈವಿಧ್ಯತೆ ಬಿಂಬಿಸುವ ನೃತ್ಯದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮಕ್ಕೆ ಶಿಕ್ಷಕ ವಿದ್ಯಾರ್ಥಿಗಳಾದ ನಾಗಶ್ರೀ ಹೆಗಡೆ ಪ್ರಾರ್ಥಿಸಿದರು. ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಪ್ರೊ. ರೇಖಾ ಯಲಿಗಾರ ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರಶಸ್ತಿ ವಿತರಣಾ ಯಾದಿಯನ್ನು ಪ್ರೊ. ಸುಬ್ರಹ್ಮಣ್ಯ ಭಟ್ ವಾಚಿಸಿದರು. ಶಿಕ್ಷಕ ವಿದ್ಯಾರ್ಥಿ ಮಹೇಶ್ ಕಲ್ಯಾಣಕರ್ ಮತು ಶಿಕ್ಷಕ ವಿದ್ಯಾರ್ಥಿನಿ ವಿ.ಅನ್ವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Share This
300x250 AD
300x250 AD
300x250 AD
Back to top