Slide
Slide
Slide
previous arrow
next arrow

ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ ಅಡಿಯಲ್ಲಿ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಜೋಯಿಡಾ ತಾಲೂಕುಗಳನ್ನು ಬಲಪಡಿಸಲು ಮತ್ತು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಗುತ್ತಿಗೆ ಆಧಾರದ ಮೇಲೆ 1 ವರ್ಷ ಅವಧಿಗೆ (Aspirational Block Programme) ಪ್ರತಿ ತಾಲೂಕಿಗೆ ಒಬ್ಬ ಆಸ್ಪಿರೇಷನಲ್ ಬ್ಲಾಕ್ ಫೆಲೋಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ನೀತಿ ಆಯೋಗ ನಿಗದಿಪಡಿಸಿದಂತೆ ಆಯ್ಕೆಯಾದ ಪ್ರತಿಯೊಬ್ಬ ಆಸ್ಪಿರೇಷನಲ್ ಬ್ಲಾಕ್ ಫೆಲೋಗೆ ಮಾಸಿಕ ರೂ.55,000 ಗಳನ್ನು ಸಂಭಾವನೆಯಾಗಿ ನೀಡಲಾಗುತ್ತದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಡೇಟಾ ವಿಶ್ಲೇಷಣೆ ಮತ್ತು ಅವುಗಳನ್ನು ಪ್ರಸ್ತುತಪಡಿಸುವ ಕೌಶಲ್ಯ, ಕಂಪ್ಯೂಟರ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ತಿಳಿದಿರಬೇಕು. ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಸ್ಕಿಲ್, ಸಾಮಾಜಿಕ ಅಭಿವೃದ್ಧಿ ಸಂಸ್ಥೆಗಳಲ್ಲಿ ಕೆಲಸ/ ಇಂಟರ್ಶೀಪ್ ಮಾಡಿದ ಅನುಭವ ಹೊಂದಿರಬೇಕು. ಇಂಗ್ಲೀಷ್ ಮತ್ತುಕನ್ನಡ ಭಾಷೆಗಳಲ್ಲಿ ಉತ್ತಮ ಸಂವಹನ ಕೌಶಲ್ಯವನ್ನು ಹೊಂದಿದ್ದು, ಕನಿಷ್ಠ 18 ವರ್ಷದಿಂದ 40 ವರ್ಷದವರೆಗಿನ ವಯೋಮಾನದವರಾಗಿರಬೇಕು. ಗ್ರಾಮೀಣಾಭಿವೃದ್ಧಿ ವಿಷಯದಲ್ಲಿಉನ್ನತ ಶಿಕ್ಷಣ ಮತ್ತುಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಹ ವಿದ್ಯಾರ್ಹತೆ ಮತ್ತು ಅನುಭವ ಹೊಂದಿದ ಅಭ್ಯರ್ಥಿಗಳು ಸ್ವಯಂ ದೃಢೀಕರಿಸಿದ ದಾಖಲೆಗಳ ಪ್ರತಿಗಳು, ಸೇವಾನುಭವ ಪ್ರಮಾಣ ಪತ್ರಗಳು, ಮತ್ತುಇತ್ತೀಚಿನ ಭಾವಚಿತ್ರದೊಂದಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಯನ್ನು ನೊಂದಾಯಿತ ಅಂಚೆ/ ಖುದ್ದಾಗಿ ಫೆ.9 ರೊಳಗಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲಾ ಪಂಚಾಯತ ಉತ್ತರಕನ್ನಡ, ಕಾರವಾರ ರವರ ಕಚೇರಿಗೆ ಸಲ್ಲಿಸಬೇಕು. ನಿಗಧಿತ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಹ ಅಭ್ಯರ್ಥಿಗಳು ಸಂದರ್ಶನ ಸಮಯದಲ್ಲಿ ಪರಿಶೀಲನೆಗಾಗಿ ತಾವು ಸಲ್ಲಿಸಿದ ದಾಖಲೆಗಳ ಮೂಲ ದಾಖಲೆಗಳನ್ನು ಪರಿಶೀಲನೆಗೆ ಒದಗಿಸುವುದು. ಹೆಚ್ಚಿನ ಮಾಹಿತಿಗಾಗಿ ಸುನೀಲ್ ಖಾನೆವಾಲೆ ,ಗ್ರಾ.ಪಂ. ಗ್ರೇಡ್-1 ಕಾರ್ಯದರ್ಶಿ ,ದೂರವಾಣಿ ಸಂಖ್ಯೆ TEL:+918073972748ಇವರನ್ನು ಸಂಪರ್ಕಿಸುವ0ತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಈಶ್ವರಕುಮಾರ್ ಕಾಂದೂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top