ಹಳಿಯಾಳ : ಭಾರತೀಯ ಜನತಾ ಪಕ್ಷದ ಉತ್ತರ ಕನ್ನಡ ಜಿಲ್ಲೆಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ತಾಲೂಕಿನ ಶಿವಾಜಿ ನರಸಾನಿ ಅವರು ನೇಮಕಗೊಳಿಸಲಾಗಿದ್ದು, ಈ ಬಗ್ಗೆ ಜಿಲ್ಲಾಧ್ಯಕ್ಷರಾದ ಎನ್.ಎಸ್.ಹೆಗಡೆ ಅಧಿಕೃತ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.
ಶಿವಾಜಿ ನರಸಾನಿ ಅವರು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಾಗಿ, ಮಂಡಲ ಬಿಜೆಪಿ ಅಧ್ಯಕ್ಷರಾಗಿ, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾಗಿ, ಮರಾಠಾ ಸಮುದಾಯದ ಪ್ರಮುಖರಾಗಿ, ರಾಜಕೀಯ ಹಾಗೂ ಸಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.